ಕರ್ನಾಟಕ

karnataka

ETV Bharat / state

ಪ್ರಧಾನಿ ರಾಜ್ಯದ ಜನರ ನೋವಿಗೆ ಸ್ಪಂದಿಸದಿರುವುದು ವಿಷಾದನೀಯ.. ಮಾಜಿ ಸಿಎಂ ಹೆಚ್‍ಡಿಕೆ

ಇಸ್ರೋ ವಿಜ್ಞಾನಿಗಳ ಆತ್ಮಸ್ಥೈರ್ಯ ತುಂಬಲು ಬಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರ ನೋವಿಗೆ ಸ್ಪಂದಿಸದಿರುವುದು ವಿಷಾದನೀಯ ಎಂದು ಮಾಜಿ ಸಿಎಂ ಹೆಚ್‍ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ

By

Published : Sep 8, 2019, 1:49 PM IST

ಬೆಂಗಳೂರು:ಇಸ್ರೋ ವಿಜ್ಞಾನಿಗಳ ಆತ್ಮಸ್ಥೈರ್ಯ ತುಂಬಲು ಬಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರ ನೋವಿಗೆ ಸ್ಪಂದಿಸದಿರುವುದು ವಿಷಾದನೀಯ ಎಂದು ಮಾಜಿ ಸಿಎಂ ಹೆಚ್‍ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್‍ ಮಾಡಿರುವ ಅವರು, ಚಂದ್ರಯಾನ2 ವೀಕ್ಷಿಸಲು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ. ಆದರೆ, ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು, ಮಕ್ಕಳನ್ನು ತಿರುಗಿಯೂ ನೋಡದೆ ಕೇಂದ್ರದಿಂದ ಯಾವುದೇ ಪರಿಹಾರವನ್ನೂ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ ವಿಚಾರ ಎಂದಿದ್ದಾರೆ.

ರಾಜ್ಯದಲ್ಲಿ ‌ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಪ್ರಧಾನಿಗಳು ಬೆಂಗಳೂರಿಗೆ ಬಂದರೂ ಅವರನ್ನು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ಪರಿಹಾರ ಧನವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ದುರ್ಬಲರಾಗಿರೋದು ನಮ್ಮ ರಾಜ್ಯದ ದುರ್ದೈವ ಎಂದು ಕಠುವಾಗಿ ನುಡಿದಿದ್ದಾರೆ.

ಸಿಎಂ ಯಡಿಯೂರಪ್ಪ ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ, 'ಬೆಂಗಳೂರು ನಗರದ ಪರಿವೀಕ್ಷಣೆ' ಎಂಬ ನಾಟಕವಾಡುತ್ತಿದ್ದಾರೆ ಎಂದು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details