ಬೆಂಗಳೂರು: ನಗರದ ಬಳ್ಳಾರಿ ರಸ್ತೆಯಲ್ಲಿರುವ ಡಿಸೈನ್ ಬಾಕ್ಸ್ ಕಂಪನಿ ಮೇಲೆ ಐಟಿ ಅಧಿಕಾರಿಗಳು ದಾಳಿ ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ಪಂಜಾಬ್, ದೆಹಲಿ ಹಾಗೂ ಕರ್ನಾಟಕದಲ್ಲಿರುವ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ರಾಜಕೀಯ ನಾಯಕರಿಗೆ ಪೊಲಿಟಿಕಲ್ ಕ್ಯಾಂಪೇನ್ ಸೇರಿದಂತೆ ಸೋಷಿಯಲ್ ಮೀಡಿಯಾ ಕ್ಯಾಂಪೇನ್ ನಡೆಸುವ ಕಂಪನಿ ಇದಾಗಿದೆ. ಬೆಳಗ್ಗೆ ಆರು ಗಂಟೆ ಸುಮಾರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.