ಬೆಂಗಳೂರು: ರೌಡಿಶೀಟರ್ ಎಂಬ ಕಾರಣಕ್ಕಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಫೈಟರ್ ರವಿ ಎಂಬಾತನ ಮನೆ ಮೇಲೆ ಇಂದು ಬೆಳ್ಳಂಬೆಳ್ಳಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೈಯಾಲಿಕಾವಲ್ನಲ್ಲಿರುವ ಮನೆ ಮೇಲೆ ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಆದಾಯಕ್ಕಿಂತ ಹೆಚ್ಚು ಹಣ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಬೆಂಗಳೂರು: ಫೈಟರ್ ರವಿ ಮನೆ ಮೇಲೆ ಐಟಿ ದಾಳಿ - Fighter Ravi
IT raid on fighter Ravi house: ಅದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಹಣ ಸಂಪಾದನೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಐಟಿ ದಾಳಿ ನಡೆಸಿದೆ.
Published : Dec 21, 2023, 1:42 PM IST
|Updated : Dec 21, 2023, 1:50 PM IST
ಅಪರಾಧ ಚಟುವಟಿಕೆಯಿಂದ ದೂರವಾಗಿ ರಾಜಕಾರಣದಲ್ಲಿ ಫೈಟರ್ ರವಿ ಗುರುತಿಸಿಕೊಂಡಿದ್ದ. ಬಿಜೆಪಿ ಸೇರಿ ಮಂಡ್ಯದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಅಣಿಯಾಗಿದ್ದ. ಇದಕ್ಕೆ ಪೂರಕ ಎಂಬಂತೆ ಪ್ರಧಾನಿ ರಾಜ್ಯಕ್ಕೆ ಬಂದಾಗ ಸ್ವಾಗತ ಮಾಡುತ್ತಿರುವ ಪೋಟೋ ಕೂಡ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು. ರೌಡಿಶೀಟರ್ಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಸದ್ಯ ಅಕ್ರಮವಾಗಿ ಆದಾಯಕ್ಕಿಂತ ಹೆಚ್ಚು ಹಣ ಸಂಪಾದನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಫೈಟರ್ ರವಿ ವಿರುದ್ಧ ರೌಡಿಶೀಟ್ ಮುಂದುವರೆಸಲು ಹೈಕೋರ್ಟ್ ತಡೆಯಾಜ್ಞೆ