ಬೆಂಗಳೂರು:ಇಂದು ಮುಂಜಾನೆ ನಗರದ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿ.ವಿ.ರಾಮನ್ ನಗರದಲ್ಲಿರುವ ಬಾಗಮನೆ ಟೆಕ್ ಪಾರ್ಕ್ ಕ್ಯಾಂಪಸ್ ಒಳಗಿನ ಕೆಲವು ಖಾಸಗಿ ಕಂಪನಿಗಳು ಹಾಗೂ ಹುಳಿಮಾವು ಬಳಿಯಿರುವ ಐಟಿ ಕಂಪನಿಯೂ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತೆರಿಗೆ ವಂಚನೆ ಆರೋಪ: ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಂಪನಿಗಳ ಮೇಲೆ IT ದಾಳಿ - ಬೆಂಗಳೂರು ನ್ಯೂಸ್
ರಾಜಧಾನಿಯ ಹಲವು ಕಂಪನಿಗಳಿಗೆ ಇಂದು ಮುಂಜಾನೆಯೇ ಆದಾಯ ತೆರಿಗೆ ಇಲಾಖೆ (ಐಟಿ) ಶಾಕ್ ನೀಡಿದೆ.
ಬೆಂಗಳೂರು
Published : Sep 27, 2023, 10:37 AM IST