ಕರ್ನಾಟಕ

karnataka

By

Published : Jan 17, 2020, 8:41 PM IST

ETV Bharat / state

ಸಂಪುಟದಿಂದ ನನ್ನ ಕೈಬಿಡೋದು ಊಹಾಪೋಹ.. ಅದಕ್ಕೆ ರಿಯಾಕ್ಟ್ ಮಾಡಲ್ಲ.. ಸಚಿವ ಶೆಟ್ಟರ್‌

ಹಲವಾರು ಪ್ರಕರಣಗಳಲ್ಲಿ ಎಸ್​ಡಿಪಿಐ ಕೈವಾಡ‌ ಇರುವ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಕೈಗೊಂಡು ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಾರ್ಹ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

jagadeesh shetter
ಜಗದೀಶ್ ಶೆಟ್ಟರ್

ಬೆಂಗಳೂರು:ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣ ಮತ್ತು ಬಿಜೆಪಿ ನಾಯಕರ ಹತ್ಯೆ ಯತ್ನದ ಆರೋಪದ ಹಿನ್ನೆಲೆಯಲ್ಲಿ ಎಸ್​ಡಿಪಿಐ ಸಂಘಟನೆ ನಿಷೇಧ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವ ಸಂಬಂಧ ಗೃಹ ಇಲಾಖೆ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೃಹತ್‌ ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್..​

ಖನಿಜ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು ಪ್ರಕರಣಗಳಲ್ಲಿ ಎಸ್​ಡಿಪಿಐ ಕೈವಾಡ‌ ಇರುವ ಮಾಹಿತಿ ಇತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಿರುವುದು ಸ್ವಾಗತಸರ್ಹ ಎಂದರು.

ಎಸ್​ಡಿಪಿಐ ಸಂಘಟನೆಗೆ ನಿಷೇಧ ಹೇರುವ ವಿಚಾರ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ನಂತರ ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಅವಕಾಶ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು. ಸಂಪುಟದಿಂದ ತಮ್ಮನ್ನು ಕೈಬಿಡುವುದು ಊಹಾಪೋಹ, ಇಂತಹ ವದಂತಿಗೂ ಪ್ರತಿಕ್ರಿಯೆ ನೀಡಲ್ಲ ಎಂದರು.

ಬಳ್ಳಾರಿಯಲ್ಲಿ ಜಿಂದಾಲ್​ಗೆ ಭೂಮಿ ಹಸ್ತಾಂತರ ಮಾಡುವ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹಿಂದೆ ಭೂಮಿ ಕೊಡಲು ನಾವೇ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದೆವು. ಈಗ ಅದರ ಕಾನೂನಾತ್ಮಕ ಅಂಶ, ಇತ್ಯಾದಿ ಪರಿಶೀಲನಾ‌ ಹಂತದಲ್ಲಿದೆ. ಎಲ್ಲವನ್ನೂ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ABOUT THE AUTHOR

...view details