ಬೆಂಗಳೂರು:ನ್ಯೂ ಮುಂಬೈ ಮಾದರಿಯಲ್ಲಿ ನವ ಬೆಂಗಳೂರು ನಿರ್ಮಾಣ ಮಾಡುವ ಅಗತ್ಯವಿದ್ದು, ಈ ಸಂಬಂಧ ಎಲ್ಲರೂ ಚರ್ಚಿಸಿ ತೀರ್ಮಾನಿಸುವ ಅಗತ್ಯವಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶೀಘ್ರದಲ್ಲೇ ಸರ್ಕಾರದಿಂದ ನೂತನ ಕೈಗಾರಿಕಾ ನೀತಿ ಜಾರಿಗೊಳಿಸಲಾಗುತ್ತದೆ. ಅದರಲ್ಲಿ ಟೈರ್ 2-3 ನಗರಗಳಿಗೆ ಆದ್ಯತೆ ನೀಡಲಾಗುತ್ತದೆ. ಇದೇ ಕಾರಣಕ್ಕೆ ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗೆ ಹುಬ್ಬಳ್ಳಿಯಲ್ಲಿ ಇನ್ವೆಸ್ಟರ್ಸ್ ಮೀಟ್ ಮಾಡಲಾಗಿದೆ ಎಂದರು.