ಕರ್ನಾಟಕ

karnataka

ETV Bharat / state

ಸಿಜೆಐಗೆ ಜಗನ್ ಮೋಹನ್ ರೆಡ್ಡಿ ಪತ್ರ: ಬೆಂಗಳೂರು ವಕೀಲರ ಸಂಘ‌ ಖಂಡನೆ - ಬೆಂಗಳೂರು

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿರುವುದನ್ನು ಬೆಂಗಳೂರು ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

AAB condemns
ಸಿಜೆಐಗೆ ಜಗನ್ ಮೋಹನ್ ರೆಡ್ಡಿ ಪತ್ರ: ಎಎಬಿ ಖಂಡನೆ

By

Published : Oct 20, 2020, 11:21 AM IST

ಬೆಂಗಳೂರು: ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿ ಮತ್ತು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಆರೋಪ ಮಾಡಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ(ಸಿಜೆಐ)ಗೆ ಪತ್ರ ಬರೆದಿರುವುದನ್ನು ಬೆಂಗಳೂರು ವಕೀಲರ ಸಂಘ (ಎಎಬಿ) ತೀವ್ರವಾಗಿ ಖಂಡಿಸಿದೆ.

ಈ ಕುರಿತು ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಎ.ಎನ್. ಗಂಗಾಧರಯ್ಯ ಸಿಜೆಐಗೆ ಪತ್ರ ಬರೆದು, ಜಗನ್ ಮೋಹನ್ ರೆಡ್ಡಿ ಅವರ ಈ ನಡೆ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಮಾಡಿದ ದಾಳಿಯಾಗಿದೆ. ಇದು ದೇಶದ ನ್ಯಾಯಾಂಗ ಮತ್ತು ದೇಶದ ನೆಲದ ಕಾನೂನಿನ ಗೌರವ ಹಾಗೂ ಘನತೆಯನ್ನು ಕುಗ್ಗಿಸುತ್ತದೆ. ಇಂತಹ ಉದ್ದೇಶಪೂರ್ವಕ ಕೃತ್ಯಗಳನ್ನು ನಿಯಂತ್ರಿಸುವ ಸಂಬಂಧ ಒಂದು ವ್ಯವಸ್ಥೆ ರೂಪಿಸಬೇಕು ಎಂದು ಕೋರಿದ್ದಾರೆ.

ABOUT THE AUTHOR

...view details