ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 2ನೇ ಅವಧಿಯ ಮೊದಲ ವರ್ಷ ಪೂರ್ಣಗೊಂಡಿರುವ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಸಮರ್ಥ ನಾಯಕತ್ವ ಸ್ವಾವಲಂಬಿ ಭಾರತ ಅಭಿಯಾನದ ಕರ್ನಾಟಕ ಜನ ಸಂವಾದ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬೃಹತ್, ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ವರ್ಚುವಲ್ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಜನರನ್ನು ಯಶಸ್ವಿಯಾಗಿ ತಲುಪಲು ಆಯೋಜಿಸಿದ್ದ ಈ ಜನ ಸಂವಾದ ಕಾರ್ಯಕ್ರಮ ತನ್ನ ಗುರಿಯನ್ನು ತಲುಪಿದೆ. ಬಿಜೆಪಿ ಕಾರ್ಯಾಲಯಗಳು, ಮನೆ ಮನೆಗಳು ಹಾಗೂ ತಮ್ಮ ಮೊಬೈಲ್‌ಗಳ ಮೂಲಕ ಈ ರ್ಯಾಲಿಯಲ್ಲಿ ಭಾಗವಹಿಸಿದ ಕೋಟ್ಯಂತರ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 6 ವರ್ಷಗಳಲ್ಲಿ ಅದರಲ್ಲೂ ವಿಶೇಷವಾಗಿ ತಮ್ಮ 2ನೇ ಅವಧಿಯ ಮೊದಲ ವರ್ಷದ ಸಾಧನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.