ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಐವರು ಆರೋಪಿಗಳ ಬಂಧಿಸಿರುವ ಪೊಲೀಸರಿಗೆ ಒಂದು ಲಕ್ಷ ರೂಪಾಯಿಯನ್ನು ಕೊಡುವುದಾಗಿ ನವರಸ ನಾಯಕ ಜಗ್ಗೇಶ್ ಘೋಷಿಸಿದ್ದರು.
ಇದೀಗ ಜಗ್ಗೇಶ್ ದಂಪತಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಒಂದು ಲಕ್ಷ ರೂಪಾಯಿ ಚೆಕ್ ನೀಡುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ಇದನ್ನೂ ಓದಿರಿ: ಮೈಸೂರು ರೇಪ್ ಕೇಸ್ : ಆರೋಪಿಗಳ ಬಂಧಿಸಿದ ಪೊಲೀಸರಿಗೆ ₹1 ಲಕ್ಷ ಘೋಷಿಸಿದ ನಟ ಜಗ್ಗೇಶ್
ಬೆಳಗ್ಗೆಯಷ್ಟೇ ನಟ ಜಗ್ಗೇಶ್, ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನನ್ನ ರಾಜ್ಯದ ಪೊಲೀಸರ ಬಗ್ಗೆ ಹೆಮ್ಮೆ ಪಡುತ್ತೇನೆ. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲೀಸ್ ಎಂದು ಹೆಮ್ಮೆ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಬಂಧಿತರು ತಮಿಳುನಾಡಿನ ಕೂಲಿ ಕಾರ್ಮಿಕರು - ಡಿಜಿಪಿ ಸೂದ್