ಕರ್ನಾಟಕ

karnataka

ETV Bharat / state

ಚಕ್ರವರ್ತಿ ಸೂಲಿಬೆಲೆ ಬೆನ್ನಿಗೆ ನಿಂತ ಜಗ್ಗೇಶ್: ಟ್ವೀಟ್ ಮೂಲಕ ಎಂ.ಬಿ.ಪಾಟೀಲ್‌ಗೆ ತಿರುಗೇಟು - ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ

ಸಚಿವ ಎಂ.ಬಿ.ಪಾಟೀಲ್​ ಹೇಳಿಕೆಗೆ ರಾಜ್ಯಸಭಾ ಸದಸ್ಯ, ಹಿರಿಯ ನಟ ಜಗ್ಗೇಶ್ ಟ್ವೀಟ್​ ಮಾಡಿ ತಿರುಗೇಟು ನೀಡಿದ್ದಾರೆ.

Jaggesh counter tweet
Jaggesh counter tweet

By

Published : Jun 5, 2023, 7:36 PM IST

Updated : Jun 5, 2023, 7:56 PM IST

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ ಹೇಳಿಕೆಗೆ ರಾಜ್ಯಸಭಾ ಸದಸ್ಯ ಮತ್ತು ಕನ್ನಡದ ಹಿರಿಯ ನಟ ಜಗ್ಗೇಶ್ ಅವರು​ ಕೌಂಟರ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಹಿಟ್ಲರ್ ಸರ್ಕಾರಕ್ಕೆ ಹೋಲಿಸಿದ್ದ ಸೂಲಿಬೆಲೆ ಹೇಳಿಕೆಗೆ ವಿಜಯಪುರ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದರು. ಇದೇ ವಿಚಾರವನ್ನಿಟ್ಟುಕೊಂಡು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದ್ದಾರೆ.

ಸೂಲಿಬೆಲಿ ಅವರು ಯಾವ ಅಧಿಕಾರದ ಹಿಂದೆ ಹೋಗದೇ ಸಾಂಸ್ಕೃತಿಕ, ತತ್ವ, ವಿಚಾರ, ಕೆರೆ-ಕಟ್ಟೆ ಪುನರುಜ್ಜೀವನ, ಪ್ರವಚನ ಮಾಡುವ ಸಾತ್ವಿಕ ಚಿಂತಕ. ಅವರನ್ನು ಜೈಲಿಗೆ ಹಾಕುವೆ ಎಂದಿದ್ದಾರೆ ಎಂ.ಬಿ.ಪಾಟೀಲ್‌. ಗೆದ್ದು ತಿಂಗಳಿಗೇ ಈ ಮಾತು!. ಮಾನ್ಯರೇ ಕಾನೂನು ನಿಮ್ಮ ಜೇಬಲ್ಲಿ ಇದೆಯೇ? ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ ಎಂದು ಸೂಲಿಬೆಲಿ ಪರ ಬ್ಯಾಟ್​ ಬೀಸಿದ್ದಾರೆ.

ಜಗ್ಗೇಶ್​ ಟ್ವೀಟ್​ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಜಾಗ ಮಾಡಿಕೊಟ್ಟಿದೆ. ಕೆಲವರು ಜಗ್ಗೇಶ್​ ಪರವಾಗಿ ಕಾಮೆಂಟ್​ ಮಾಡಿದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ನೆಟಿಜನ್​ ಒಬ್ಬರು ಧನ್ಯವಾದಗಳು ಸಾರ್. ಇಂತಹ ಸನ್ನಿವೇಶದಲ್ಲಿ ರಾಯರು ನಮ್ಮೆಲ್ಲರಲ್ಲಿ ಧೈರ್ಯ ತುಂಬಲಿ ಎಂದು ಕಾಮೆಂಟ್​ ಮಾಡಿದರೆ, ಮತ್ತೊಬ್ಬರು ಈ ರೀತಿ ಪ್ರತಿಕ್ರಿಯೆ ಮಾಡುವ ಮುಂಚೆ ಪಾಟೀಲ್ ಸಾಹೇಬರು ಏನು ಹೇಳಿದ್ದಾರೆ ಅಂತ ಮೊದಲು ನೋಡಿ ಜಗ್ಗಣ್ಣ ಅಂತ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜೂನ್ 11ರಿಂದ ಜಾರಿ: ಸರ್ಕಾರದ ಗೈಡ್​ಲೈನ್ಸ್​​ ಏನು?

ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು?: ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಏನ್ ಮಾಡಿದ್ದಾರೆ? ನಾಲ್ಕು ವರ್ಷ ಅನಾಹುತ ಮಾಡಿದ್ದಾರೆ. ಅವರು ಮಾಡಿದ ಅನಾಹುತಗಳನ್ನು ನಾವು ಸರಿಪಡಿಸುತ್ತಿದ್ದೇವೆ. ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಆಜಾನ್ ಅಂತ ಹೇಳಿ ನಾಟಕ ಮಾಡಿದ್ದಾರೆ. ಇನ್ಮುಂದೆ ಇಂಥ ನಾಟಕ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಕೆ ಕೊಟ್ಟಿದ್ದರು.

ಅಲ್ಲದೇ ಗೋಹತ್ಯೆ ನಿಷೇಧ ಕಾಯ್ದೆ ರೈತರಿಗೆ ಅನಕೂಲವಾಗುವಂತೆ ಮಾರ್ಪಾಡು ಮಾಡುವ ಬಗ್ಗೆ ಪಶುಸಂಗೋಪನಾ‌ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಸೂಕ್ಷ್ಮ ವಿಚಾರ. ಇದನ್ನು‌ ನಮ್ಮ ಪಕ್ಷ ಹಾಗೂ ವರಿಷ್ಠರು ನಿರ್ಧಾರ ಮಾಡುತ್ತಾರೆ. ನಾನು ವೈಯುಕ್ತಿಕವಾಗಿ ಹೇಳಿಕೆ ನೀಡಲ್ಲ ಎಂದಿದ್ದರು. ಇದೇ ವಿಚಾರಕ್ಕ ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ.

ಮತ್ತೊಂದು ಟ್ವೀಟ್​​ ಮಾಡಿರುವ ಜಗ್ಗೇಶ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಹುಟ್ಟುಹಬ್ಬದ ಹಬ್ಬದ ಶುಭಾಶಯಗಳು ಶ್ರೀ ಯೋಗಿ ಅವರಿಗೆ ಎಂದು ಅವರ ಫೋಟೋ ಸಹಿತ ಶೀರ್ಷಿಕೆ ಬರೆದುಕೊಂಡಿದ್ದಾರೆ. ವಿಶ್ವ ಪರಿಸರದ ಕುರಿತೂ ಸಹ ಜಗ್ಗೇಶ್​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:'ಶಾಂತಿಯುತ ಕರ್ನಾಟಕ' ಸಹಾಯವಾಣಿ ಆರಂಭಿಸಿ: ಸರ್ಕಾರಕ್ಕೆ ಸಚಿವ ಎಂ.ಬಿ.ಪಾಟೀಲ್‌ ಮನವಿ

Last Updated : Jun 5, 2023, 7:56 PM IST

ABOUT THE AUTHOR

...view details