ಬೆಂಗಳೂರು: ಐಎಂಎ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ, ಜಮೀರ್ ಅಹಮದ್ಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು, ಈ ಹಿನ್ನೆಲೆಯಲ್ಲಿ ಜಮೀರ್ ಅಹಮದ್ ಖಾನ್ ವಿಚಾರಣೆಗೆ ಹಾಜರಾಗಿದ್ದಾರೆ.
ಐಎಂಎ ವಂಚನೆ ಪ್ರಕರಣ : ಜಮೀರ್ ಅಹಮದ್ಗೆ ಎಸ್ಐಟಿ ಡ್ರಿಲ್..! - ponzi scam
ಐಎಂಎ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ, ಜಮೀರ್ ಅಹಮದ್ಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು, ಈ ಹಿನ್ನೆಲೆಯಲ್ಲಿ ಜಮೀರ್ ಅಹಮದ್ ಖಾನ್ ವಿಚಾರಣೆಗೆ ಹಾಜರಾಗಿದ್ದಾರೆ.
ಐಎಂಎ ವಂಚನೆ ಪ್ರಕರಣ : ಜಮೀರ್ ಅಹಮದ್ಗೆ ಎಸ್ಐಟಿ ಡ್ರೀಲ್..!
ಐಎಂಎ ಸಂಸ್ಥೆ ಮಾಲೀಕ ಮೊಹಮ್ಮದ್ ಮನ್ಸೂರ್ಖಾನ್ ನೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ್ದರ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಳೆದ ಸೋಮವಾರ ಜಮೀರ್ ಹಾಗೂ ಶಿವಾಜಿ ನಗರ ಮಾಜಿ ಶಾಸಕ ರೋಷನ್ ಬೇಗ್ಗೆ ಎಸ್ಐಟಿ ನೊಟಿಸ್ ನೀಡಿತ್ತು.
ವಿಧಾನಸಭಾ ಕಾರ್ಯಕಲಾಪ ಹಿನ್ನೆಲೆಯಲ್ಲಿ ಎರಡು ದಿನಗಳ ವಿಸ್ತರಿಸಿ ಇಂದು ಹಾಜರಾಗುವಂತೆ ನೋಟಿಸ್ ನೀಡಿತ್ತು. ಇದರಂತೆ ಜಮೀರ್ ಹಾಜರಾಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ರೋಷನ್ ಬೇಗ್ ವಿಚಾರಣೆಗೆ ಬರುವಂತೆ ಹೇಳಿದ್ದು..ಈ ಹಿನ್ನೆಲೆಯಲ್ಲಿ ಸಿಐಡಿ ಕಚೇರಿಗೆ ಆಗಮಿಸುತ್ತಿದ್ದಾರೆ.