ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಜೆಡಿಎಸ್ ಕಾರ್ಯಕರ್ತ ನರಸಿಂಹ ಮೂರ್ತಿ ವಿರುದ್ಧ ದೂರು ದಾಖಲಾಗಿದೆ.
ಜಮೀರ್ ಅಹ್ಮದ್ ಬೆಂಬಲಿಗ ನವೀನ್ ಗೌಡ ಎಂಬುವರು ನರಸಿಂಹಮೂರ್ತಿ ವಿರುದ್ಧ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರನ್ನಾಧಿರಿಸಿ ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿ ನರಸಿಂಹ ಮೂರ್ತಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಜೂನ್ 10 ರಂದು ಫೇಸ್ಬುಕ್ನ ಗಜಪಡೆ ಹೆಸರಿನ ಪೇಜ್ನಲ್ಲಿ ಜಮೀರ್ ವಿರುದ್ಧ ನರಸಿಂಹ ಮೂರ್ತಿ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು.
ಇದನ್ನೂ ಓದಿ: DSS ಅಧ್ಯಕ್ಷ ರಘು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ ಜಗ್ಗೇಶ್..
ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿತ್ತು. ನ್ಯಾಯಾಲಯದ ನಿರ್ದೇಶನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.