ಕರ್ನಾಟಕ

karnataka

ETV Bharat / state

ಅಕ್ರಮ ಗಣಿಗಾರಿಕೆ ಪ್ರಕರಣ : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ!! - ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿದ್ದ ಗಾಲಿ ಜನಾರ್ದನ ರೆಡ್ಡಿಗೆ, ಸಿಆರ್‌ಪಿಸಿ ಸೆಕ್ಷನ್ 409 ಅಡಿ ರೆಡ್ಡಿ ವಿಚಾರಣೆಗೆ ಹೈಕೋರ್ಟ್ ಅಸ್ತು ಎಂದಿದೆ.

ಜನಾರ್ದನ ರೆಡ್ಡಿ

By

Published : Oct 18, 2019, 8:36 PM IST

ಬೆಂಗಳೂರು: ಅಕ್ರಮ ಗಣಿಗಾರಿಕೆ ಮಾಡಿ ಸಾಕಷ್ಟು ಏಳುಬೀಳುಗಳನ್ನು ಕಂಡು, ಜೈಲು ವಾಸ ಅನುಭವಿಸುತ್ತಿದ್ದ ಗಾಲಿ ಜನಾರ್ದನ ರೆಡ್ಡಿಗೆ, ಸಿಆರ್‌ಪಿಸಿ ಸೆಕ್ಷನ್ 409 ಅಡಿ ರೆಡ್ಡಿ ವಿಚಾರಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಸಿಆರ್‌ಪಿಸಿ ಸೆಕ್ಷನ್ 409 ಕ್ರಿಮಿನಲ್ ವಿಶ್ವಾಸದ್ರೋಹವಾಗಿದ್ದು, ಈ ಪ್ರಕಾರ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.

ವಿಶೇಷ ಕೋರ್ಟ್ ಸೆ.409 ಅಡಿ ವಿಚಾರಣೆ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದ್ದು. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೈ ಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅಪೀಲ್ ಸಲ್ಲಿಸಿದ್ದ ಸಿಬಿಐಗೆ ಹೈಕೋರ್ಟ್ ಅಸ್ತು ಎಂದಿದೆ.

ABOUT THE AUTHOR

...view details