ಕರ್ನಾಟಕ

karnataka

ETV Bharat / state

ಜನವರಿ 31ರಂದು ಪೋಲಿಯೋ ಲಸಿಕೆ ಹಾಕಲು ರಾಜ್ಯದಲ್ಲಿ ಹೀಗಿದೆ ತಯಾರಿ - ಜನವರಿ 31 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನ

ಪೋಲಿಯೊ ಸೋಂಕಿನಲ್ಲಿ ಮೂರು ವಿಧಗಳಿವೆ. ಪಿ-1, ಪಿ-2 ಮತ್ತು ಪಿ-3 ಇದ್ದು, ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ ಹಾಗೂ 1999ರಿಂದ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ ಮತ್ತು ಅಧಿಕೃತವಾಗಿ 2015ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣಪತ್ರವನ್ನು ಪಡೆದಿದೆ.

January 31st is National Pulse Polio Day
ಜನವರಿ 31 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನ

By

Published : Jan 29, 2021, 10:47 PM IST

ಬೆಂಗಳೂರು: ಕೋವಿಡ್ ಹಿನ್ನೆಲೆ ಮುಂದೂಡಿದ್ದ ಪಲ್ಸ್ ಪೋಲಿಯೋ ದಿನಾಂಕವನ್ನು ಆರೋಗ್ಯ ಇಲಾಖೆ ಪ್ರಕಟಿಸಿದೆ. ರಾಷ್ಟ್ರೀಯ ಲಸಿಕಾ ದಿನವನ್ನು ಜನವರಿ 31ರಂದು ನಡೆಸಲು ನಿರ್ಧರಿಸಿದೆ.

ಪೋಲಿಯೋ ಸೋಂಕು ಪೋಲಿಯೋ ವೈರಾಣುವಿನಿಂದ ಉಂಟಾಗುತ್ತದೆ. 5 ವರ್ಷದೊಳಗಿನ ಮಕ್ಕಳಲ್ಲಿ ತೀವ್ರತರವಾದ ಅಸ್ವಸ್ಥತೆ ಮತ್ತು ಪಾರ್ಶ್ವವಾಯು ಉಂಟುಮಾಡುತ್ತದೆ. ಕೆಲವೊಮ್ಮೆ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ.

1988ರಲ್ಲಿ ಪ್ರತಿ ವರ್ಷ 3 ಲಕ್ಷಕ್ಕೂ ಹೆಚ್ಚು ಮಕ್ಕಳು ಬಹುತೇಕ ರಾಷ್ಟ್ರಗಳಲ್ಲಿ ಪೋಲಿಯೋ ಸೋಂಕಿನಿಂದ ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದರು. ಈಗ 2 ರಾಷ್ಟ್ರಗಳಲ್ಲಿ ಮಾತ್ರ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿವೆ. ಭಾರತವು 2014ರಲ್ಲಿ ಪೋಲಿಯೋ ಮುಕ್ತ ರಾಷ್ಟ್ರ ಎಂಬುದಾಗಿ ಘೋಷಿಸಲಾಗಿದೆ. ಆದರೆ ನೆರೆ ರಾಷ್ಟ್ರಗಳಾದ ಪಾಕಿಸ್ತಾನ(84) ಮತ್ತು ಆಫ್ಘಾನಿಸ್ತಾನದಲ್ಲಿ (56) ಒಟ್ಟು 140 ಪ್ರಕರಣಗಳು 2020ರಲ್ಲೇ ಕಂಡುಬಂದಿವೆ.

ಈ ದೇಶಗಳ ಮೂಲಕ ಭಾರತಕ್ಕೆ ಪೋಲಿಯೋ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಹಾಗೂ ಪೋಲಿಯೋ ಮುಕ್ತ ಭಾರತ ಸ್ಥಿತಿಯನ್ನು ಮುಂದುವರೆಸಿಕೊಂಡು ಹೋಗಲು ಮುಂಜಾಗ್ರತಾ ದೃಷ್ಟಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಮುಂದುವರಿಸಲಾಗಿದೆ.

ಪೋಲಿಯೊ ಸೋಂಕಿನಲ್ಲಿ ಮೂರು ವಿಧಗಳಿವೆ. ಪಿ-1, ಪಿ-2 ಮತ್ತು ಪಿ-3 ಇದ್ದು, ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ ಹಾಗೂ 1999ರಿಂದ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ ಮತ್ತು ಅಧಿಕೃತವಾಗಿ 2015ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣಪತ್ರವನ್ನು ಪಡೆದಿದೆ. ಕಳೆದ 6 ವರ್ಷಗಳಿಂದ ಪಿ-3ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ.

ಇದಕ್ಕೆ ಅಧಿಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿದೆ. 2011ರಲ್ಲಿ ಜನವರಿ 2013ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೋ ಪ್ರಕರಣವು ವರದಿಯಾಗಿತ್ತು. ಕಳೆದ 10 ವರ್ಷಗಳಿಂದ ಭಾರತದಲ್ಲಿ ಇಲ್ಲಿಯವರೆಗೂ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿರುವುದಿಲ್ಲ.

ಇನ್ನು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಎಂದಿನಂತೆ ಪ್ರತಿ ಶಿಶುವಿಗೆ 5 ವರಸೆ ಒಪಿವಿ (ಓರಲ್‌ ಪೋಲಿಯೋ ವ್ಯಾಕ್ಸಿನ್) ಮತ್ತು 2 ವರಸೆ ಐಪಿಎ(ಇನ್‌ಜಕ್ಟಬಲ್ ಪೋಲಿಯೋ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳುವ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ 2021ರ ವಿವರ

ಪ್ರತಿ ವರ್ಷದಂತೆ ಈ ವರ್ಷವೂ 31ನೇ ಜನವರಿ 2021ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಲಾಗುವುದು.

ರಾಜ್ಯದಲ್ಲಿ ಎಲ್ಲಾ ಆಸ್ಪತ್ರೆಗಳಲ್ಲದೆ ಹಳ್ಳಿ, ಗುಡ್ಡಗಾಡು ಪ್ರದೇಶ, ಕಾಮಗಾರಿ ಪ್ರದೇಶ, ತೋಟದ ಮನೆ, ಪಟ್ಟಣ, ನಗರ ಪ್ರದೇಶಗಳಲ್ಲದೇ ರೈಲ್ವೆ ಸ್ಟೇಷನ್, ಮೆಟ್ರೋ, ಏರ್‌ಪೋರ್ಟ್​ಗಳಲ್ಲಿ ಹಾಗೂ ಕೊಳಚೆ ಪ್ರದೇಶಗಳು, ವಿಪಿಡಿ ಔಟ್‌ಬ್ರೇಕ್ ಪ್ರದೇಶಗಳಲ್ಲಿ ಕೂಡ ಆದ್ಯತೆ ಮೇರೆಗೆ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ.
ಇನ್ನು ಕೋವಿಡ್ 19 ಹಿನ್ನೆಲೆಯಲ್ಲಿ ರಾಷ್ಟ್ರೀಯ ಲಸಿಕಾ ದಿನವನ್ನು ಸುರಕ್ಷಿತವಾಗಿ ನಡೆಸಲಾಗುವುದು ಅಂತ ಆರೋಗ್ಯ ಇಲಾಖೆ ತಿಳಿಸಿದೆ.

  • ಗುರಿ (0-5 ವರ್ಷ): 64,07,930
  • ಬೂತ್​ಗಳ ಸಂಖ್ಯೆ: 32,908
  • ಮನೆ ಮನೆ ಭೇಟಿಯ ತಂಡಗಳ ಸಂಖ್ಯೆ : 49,338
  • ಸಂಚಾರಿ ತಂಡ: 904
  • ಟ್ರಾನ್ಸಿಟ್ ತಂಡ: 1,934
  • ಲಸಿಕಾ ಕಾರ್ಯಕರ್ತರು- 11,0179
  • ಮೇಲ್ವಿಚಾರಕರು- 6,645

ಲಸಿಕೆಯ ಸಂಪೂರ್ಣ ಯಶಸ್ಸನ್ನು ಸಾಧಿಸಲು ರಾಜ್ಯ ಮಟ್ಟದಲ್ಲಿ, ಜಿಲ್ಲಾ - ತಾಲೂಕು ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದಲ್ಲದೇ ಸಹಕಾರ ಸಂಘ ಸಂಸ್ಥೆಗಳಾದ ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್, ಯುಎನ್​ಡಿಪಿ, ರೋಟರಿ, ಐಎಪಿ ಮತ್ತು ಐಎಂಎಗಳ ಸಹಕಾರವೂ ಇದೆ.

ಇದನ್ನೂ ಓದಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಬೆಂಗಳೂರಿನ ಕಚೇರಿಗೆ ಬಿಗಿ ಭದ್ರತೆ

ABOUT THE AUTHOR

...view details