ಕರ್ನಾಟಕ

karnataka

ETV Bharat / state

ಕಮಲ್ ಪಂತ್ ಸೇರಿ ಮೂವರ ವಿರುದ್ಧ ತನಿಖೆಗೆ ಆದೇಶಿಸಿದ ಮ್ಯಾಜಿಸ್ಟ್ರೇಟ್​​ ಕೋರ್ಟ್ - Bangalore city police commissioner

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮಾಜಿ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಕೊಳ್ಳದೆ ಕರ್ತವ್ಯಲೋಪ ಎಸಗಿದ್ದಾರೆ. ಇದು ಭಾರತೀಯ ಅಪರಾಧ ಸಂಹಿತೆ (ಐಪಿಸಿ) 166 (ಎ) ಅನ್ವಯ ಅಪರಾಧವಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆದರ್ಶ ಐಯ್ಯರ್ ಎಂಬುವರು ಕೋರ್ಟ್​ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.

Jarkiholi CD case
ಪೊಲೀಸ್ ಕಮೀಷನರ್ ಕಮಲ್ ಪಂತ್​ ವಿರುದ್ಧ ತನಿಖೆಗೆ ಆದೇಶ

By

Published : Nov 24, 2021, 10:24 PM IST

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸಿ.ಡಿ‌. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯವಹಿಸಿದ ಆರೋಪ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಇನ್​ಸ್ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ‌.

ನಗರದ 8ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದ ಪ್ರತಿ ಲಭ್ಯವಾಗಿದೆ‌. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮಾಜಿ ಸಚಿವ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಕೊಳ್ಳದೆ ಕರ್ತವ್ಯಲೋಪ ಎಸಗಿದ್ದಾರೆ. ಇದು ಭಾರತೀಯ ಅಪರಾಧ ಸಂಹಿತೆ (ಐಪಿಸಿ) 166 (ಎ) ಅನ್ವಯ ಅಪರಾಧವಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆದರ್ಶ ಐಯ್ಯರ್ ಎಂಬುವರು ಕೋರ್ಟ್​ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಇದರಂತೆ, ಪ್ರಕರಣದಲ್ಲಿ ಕಮಿಷನರ್ ಕಮಲ್‌ ಪಂತ್, ಡಿಸಿಪಿ ಅನುಚೇತ್, ಇನ್‌ಸ್ಪೆಕ್ಟರ್ ಮಾರುತಿ ಅವರನ್ನು ಪ್ರತಿವಾದಿಗಳಾಗಿ ಮಾಡಿದ್ದು, ಮೇಲ್ನೊಟಕ್ಕೆ ಕರ್ತವ್ಯಲೋಪ ಎಸಗಿರುವುದು ಕಂಡುಬಂದಿದೆ‌. ಹೀಗಾಗಿ ಪ್ರತಿವಾದಿಗಳ ವಿರುದ್ಧ ತನಿಖೆ ನಡೆಸಬೇಕಾದ ಅಗತ್ಯವಿದೆ. ದೂರಿನಂತೆ ಪ್ರತಿವಾದಿಗಳ ವಿರುದ್ಧ ಸಿಆರ್​ಪಿಸಿ 156 (3)ಅನ್ವಯ ತನಿಖೆ ನಡೆಸುವಂತೆ ಕಬ್ಬನ್ ಪಾರ್ಕ್ ಪೊಲೀಸರಿಗೆ ನ.23 ರಂದು ಆದೇಶಿಸಿದೆ.

ಆದೇಶ ರದ್ದು ಕೋರಿ ಹೈಕೋರ್ಟ್ ಮೊರೆ:

ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ನ್ಯಾಯಾಲಯ ಆದೇಶ ರದ್ದು ಕೋರಿ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ‌. ಹೈಕೋರ್ಟ್​ನಲ್ಲಿ ಗುರುವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹಂತದಲ್ಲೂ ಕರ್ತವ್ಯಲೋಪ ಎಸಗಿಲ್ಲ‌. ದೂರುದಾರರು ಸಂತ್ರಸ್ತೆ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಸದ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಹಾಗಾಗಿ, ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ರದ್ದು ಮಾಡುವಂತೆ ಆಯುಕ್ತರು ಹೈಕೋರ್ಟ್ ಮೊರೆ ಹೋಗಿದ್ದಾರೆ‌.

ABOUT THE AUTHOR

...view details