ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ಸುಮ್ಮನಿದ್ದ ಖತರ್ನಾಕ್ ಕಳ್ಳರು, ಅನ್ಲಾಕ್ ಆಗುತ್ತಿದ್ದಂತೆ ತಮ್ಮ ಕೈಚಳಕ ತೋರಿಸಲು ಆರಂಭಿಸಿದ್ದಾರೆ. ಜೆ.ಬಿ ನಗರದಲ್ಲಿ ಮೊಬೈಲ್, ಹ್ಯಾಂಡ್ ಬ್ಯಾಗ್ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಜೆ.ಬಿ ನಗರ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಫೋನ್, ಹಣ ಹಾಗೂ ಮನೆಯ ಕೀ ಇಟ್ಟಿದ್ದ ಒಂದು ಹ್ಯಾಂಡ್ ಬ್ಯಾಗ್ ಅನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಸುಲಿಗೆ ಮಾಡಿದ್ದರು. ಈ ಸಂಬಂಧ ಜೆ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.