ಬೆಂಗಳೂರು:ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಸಂಬಂಧ ಚರ್ಚಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸಭೆ ನಡೆಯಲಿದೆ.
ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗಿದ್ದು, ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಯಲಿದೆ. ಅದೇ ರೀತಿ ರಾಜ್ಯಸಭೆಗೆ ಸ್ಪರ್ಧಿಸುವಂತೆ ದೇವೇಗೌಡರ ಮೇಲೆ ಪಕ್ಷದ ಮುಖಂಡರು ಒತ್ತಡ ಹಾಗೂ ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕೇ, ಬೇಡವೇ ಎಂಬುದರ ಬಗ್ಗೆಯೂ ಮಹತ್ವದ ಚರ್ಚೆ ನಡೆಯಲಿದೆ.