ಕರ್ನಾಟಕ

karnataka

ETV Bharat / state

ಉಪಚುನಾವಣೆಯಲ್ಲಿ ಸೋಲು.. ಆತ್ಮಾವಲೋಕನ ಸಭೆಗೆ ಮುಂದಾದ ಜೆಡಿಎಸ್..

ಉಪಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಪಕ್ಷ ಗೌರವಿಸುತ್ತದೆ. ಭಾವನಾತ್ಮಕ ವಿಚಾರಕ್ಕೆ ಮತದಾರರು ಹೆಚ್ಚು ಮಹತ್ವ ಕೊಟ್ಟಿರಬಹುದು. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷಕ್ಕೆ ಶಕ್ತಿ ತುಂಬುವ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

JDS
ಜೆಡಿಎಸ್

By

Published : Dec 17, 2019, 7:04 PM IST

ಬೆಂಗಳೂರು:ಉಪಚುನಾವಣೆಯಲ್ಲಿ ಶೂನ್ಯ ಸಂಪಾದನೆಯಿಂದ ಕಂಗೆಟ್ಟಿರುವ ಜೆಡಿಎಸ್ ಇದೀಗ ಆತ್ಮಾವಲೋಕನ ಸಭೆ ನಡೆಸಲು ನಿರ್ಧರಿಸಿದೆ.

ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರುಗೋವಾಗೆ ತೆರಳಿದ್ದಾರೆ.ಬೆಂಗಳೂರಿಗೆ ವಾಪಸ್ ಆದ ನಂತರ, ಉಪಚುನಾವಣೆಯಲ್ಲಿ ಜೆಡಿಎಸ್ಸೋಲಿನ ಕುರಿತು ಆತ್ಮಾವಲೋಕನ ಸಭೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಸೋಲಿನ ಕಹಿಯನ್ನು ಮರೆತು ತಳಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗದಿದ್ದರೆ ಕಷ್ಟವಾಗಬಹುದು. ಅಲ್ಲದೆ, ಎರಡನೇ ಹಂತದ ನಾಯಕತ್ವವನ್ನು ಸಾಮಾಜಿಕ ನ್ಯಾಯದ ಆಧಾರದಲ್ಲಿ ಬೆಳೆಸಬೇಕಿದೆ. ಮೂರು ವರ್ಷದಲ್ಲಿ ಪಕ್ಷ ಕಟ್ಟಲು ನಾಯಕರು ಮುಂದಾಗದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳಬೇಕಾಗುತ್ತದೆ ಎಂಬ ಸಂದೇಶವನ್ನು ಕೆಲಸ ಶಾಸಕರು ರವಾನಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮೂಲಗಳು ಹೇಳಿವೆ.

10 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಎದುರಾಗಲಿದೆ. ಅಷ್ಟರಲ್ಲೇ ವಿಧಾನಪರಿಷತ್ ಚುನಾವಣೆಗಳು ಬರಲಿವೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಎಲ್ಲಾ ಭಾಗದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯುವಕರಿಗೆ ಆದ್ಯತೆ ನೀಡಬೇಕು. ಕೇವಲ ಹಳೆ ಮೈಸೂರು ಭಾಗವನ್ನು ಗಮನದಲ್ಲಿಟ್ಟುಕೊಂಡರೆ ಸಾಲದು, ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುವ ಅಗತ್ಯವಿದೆ. ಈ ಎಲ್ಲ ವಿಷಯಗಳು ಆತ್ಮಾವಲೋಕನ ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಕುಮಾರಸ್ವಾಮಿ ಅವರಿಗೇ ವಹಿಸಲು ಒತ್ತಡ ಹಾಕುವ ಸಾಧ್ಯತೆಯೂ ಇದೆ. ಹೀಗಾಗಿ, ಉಪಚುನಾವಣೆ ಸೋಲಿನ ಆತ್ಮಾವಲೋಕನ ಸಭೆ ನಿಗದಿಪಡಿಸಿ ಅಲ್ಲಿಯೇ ಒತ್ತಡ ಹೇರಲು ತೀರ್ಮಾನಿಸಲಾಗಿದ್ದು, ಕುಮಾರಸ್ವಾಮಿ ಅವರ ಸಮಯಕ್ಕಾಗಿ ಕಾಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಉಪಚುನಾವಣೆಯಲ್ಲಿ ಜೆಡಿಎಸ್​ಗೆ ಭಾರಿ ಹಿನ್ನಡೆಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಪುನರ್ ಸಂಘಟನೆ ಮಾಡುವ ಕಡೆ ಹೆಚ್ಚು ಗಮನಹರಿಸಲಾಗುವುದು ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ದೂರವಾಣಿಯಲ್ಲಿ ಈಟಿವಿ ಭಾರತ್​ಗೆ ಪ್ರತಿಕ್ರಿಯಿಸಿದ ಅವರು, ಉಪಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಪಕ್ಷ ಗೌರವಿಸುತ್ತದೆ. ಭಾವನಾತ್ಮಕ ವಿಚಾರಕ್ಕೆ ಮತದಾರರು ಹೆಚ್ಚು ಮಹತ್ವ ಕೊಟ್ಟಿರಬಹುದು. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷಕ್ಕೆ ಶಕ್ತಿ ತುಂಬು ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ.

ABOUT THE AUTHOR

...view details