ಕರ್ನಾಟಕ

karnataka

ETV Bharat / state

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಹೋರಾಟ? - JDS alone fight in Urban local bodies election,

ನವೆಂಬರ್​ನಲ್ಲಿ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್​ ಏಕಾಂಗಿಯಾಗಿ ಹೋರಾಟ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಾಂದರ್ಭಿಕ ಚಿತ್ರ

By

Published : Oct 21, 2019, 7:51 PM IST

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಜೆಡಿಎಸ್ ಚಿಂತನೆ ನಡೆಸುತ್ತಿದ್ದು, ಅಧಿಕೃತ ಪ್ರಕಟಣೆಯೊಂದೇ ಬಾಕಿಯಿದೆ ಎಂದು ಹೇಳಲಾಗ್ತಿದೆ.

ನವೆಂಬರ್​ನಲ್ಲಿ ನಡೆಯಲಿರುವ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದಿರಲು ತೀರ್ಮಾನಿಸಿರುವ ಜೆಡಿಎಸ್, ಅನಿವಾರ್ಯ ಅಥವಾ ಅಗತ್ಯವಿರುವ ಕಡೆ ಮಾತ್ರ ಸ್ನೇಹ ಪರವಾಗಿ ಹೋರಾಟ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಂದಿನ ವಿಧಾನಸಭೆ ಉಪಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಈಗಾಗಲೇ ಜೆಡಿಎಸ್ ವರಿಷ್ಠರು ತಿಳಿಸಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾವಾರು ಸಭೆ ನಡೆಸಿ ಸಂಘಟನೆ ಜೊತೆಗೆ ಚುನಾವಣಾ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆಯನ್ನು ಮಾಡಲಾಗುತ್ತದೆ.

ABOUT THE AUTHOR

...view details