ಬೆಂಗಳೂರು: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಇಂದು ಮಹತ್ವದ ಸಭೆ ನಡೆಸಿ, ನಂತರ ಸುದ್ದಿಗೋಷ್ಠಿ ಕೂಡ ಆಯೋಜಿಸಿವೆ.
ಮೈತ್ರಿ ಪಕ್ಷಗಳ ಮಹತ್ವದ ಸುದ್ದಿಗೋಷ್ಠಿಗೆ ಕ್ಷಣಗಣನೆ - ಮಹತ್ವದ ಸಭೆ
ಲೋಕಸಭೆ ಚುನಾವಣಾ ನಿಮಿತ್ತ ಮೈತ್ರಿ ಸರ್ಕಾರ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು ಗೋಷ್ಠಿಯಲ್ಲಿ ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ ಅನ್ನೋದನ್ನು ಕಾದುನೋಡಬೇಕಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬೆಳಗ್ಗಿನಿಂದ ಕಾಂಗ್ರೆಸ್ ನಾಯಕರ ಆಗಸಿ, ಭೇಟಿ ಮಾಡಿ ಸಮಾಲೋಚಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು ಅಶೋಕ ಹೋಟೆಲ್ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ - ಜೆಡಿಎಸ್ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ನಂತರ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಕಡೆಯಿಂದ ಭಾಗವಹಿಸಿದರೆ, ಜೆಡಿಎಸ್ ಕಡೆಯಿಂದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.