ಬೆಂಗಳೂರು: ಡಿಸೆಂಬರ್ 5ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಹಾಗೂ 2020ರ ಜೂನ್ ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನ ಪರಿಷತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಜೆಡಿಎಸ್ನಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಉಪ ಚುನಾವಣೆ, ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ - ಹೆಚ್. ಡಿ ಕುಮಾರಸ್ವಾಮಿ ಹೇಳಿಕೆ
ಡಿಸೆಂಬರ್ 5ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಹಾಗೂ 2020ರ ಜೂನ್ ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನ ಪರಿಷತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಜೆಡಿಎಸ್ನಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಕುಮಾರಸ್ವಾಮಿ
ಡಿಸೆಂಬರ್ 5ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿಗಳ ಪಟ್ಟಿ
- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರ ಕ್ಷೇತ್ರ - ಚೈತ್ರಾ ಗೌಡ. ಎ
- ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರ - ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ
- ರಾಣೆ ಬೆನ್ನೂರು ಕ್ಷೇತ್ರ - ಮಲ್ಲಿಕಾರ್ಜುನ ಹಲಗೇರಿ
- ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರ - ಮಾಜಿ ಸಚಿವ ಎಂ, ನಬಿ,
- ಚಿಕ್ಕಬಳ್ಳಾಪುರ ಕ್ಷೇತ್ರ - ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ
- ಬೆಂಗಳೂರು ನಗರ ವ್ಯಾಪ್ತಿಯ ಕೆ.ಆರ್.ಪುರಂ ಕ್ಷೇತ್ರ - ಸಿ. ಕೃಷ್ಣಮೂರ್ತಿ,
- ಯಶವಂತಪುರ ಕ್ಷೇತ್ರ - ಟಿ.ಎನ್. ಜವರಾಯಿಗೌಡ,
- ಶಿವಾಜಿನಗರ ಕ್ಷೇತ್ರ - ತನ್ವೀರ್ ಅಹಮ್ಮದ್ವುಲ್ಲಾ ಅವರಿಗೆ ಟಿಕೆಟ್ ನೀಡಲಾಗಿದೆ.
- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರ - ದೇವರಾಜ್ ಬಿ.ಎಲ್.
- ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರ - ಸೋಮಶೇಖರ್
- ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ.
- ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಭಾರಿ ಪೈಪೋಟಿಯಿದ್ದ ಮಹಾಲಕ್ಷ್ಮಿಲೇಔಟ್ ಕ್ಷೇತ್ರದ ಅಭ್ಯರ್ಥಿ ಹೆಸರು ಅಂತಿಮಗೊಂಡಿಲ್ಲ. ಮಾಜಿ ಉಪಮೇಯರ್ ಭದ್ರೇಗೌಡ, ಕಾಂಗ್ರೆಸ್ ಮುಖಂಡ ಗಿರೀಶ್ ಕೆ.ನಾಶಿ, ಕಾಮಾಕ್ಷಿಪಾಳ್ಯದ ರಾಜಣ್ಣ ಅವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಜೆಡಿಎಸ್ ವರಿಷ್ಠರ ಒಲವು ಯಾರ ಮೇಲಿದೆ ಎಂಬುದು ಕುತೂಹಲ ಮೂಡಿಸಿದೆ. ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಇತರ ಕ್ಷೇತ್ರಗಳ ಅಭ್ಯರ್ಥಿಗಳನ್ನು ನಾಳೆ ಘೋಷಿಸುವ ಸಾಧ್ಯತೆ ಇದೆ.
- ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರು 15 ವಿಧಾನಸಭೆ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಹಾಗೂ ವಿಧಾನಪರಿಷತ್ನ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಜಂಟಿ ಸುದ್ದಿಗೋಷ್ಠಿಯಲ್ಲಿ ಇಂದು ಘೋಷಣೆ ಮಾಡಿದರು. ಇನ್ನು ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ತಿಳಿಸಿದರು.
-
2020 ರ ಜೂನ್ ತಿಂಗಳಲ್ಲಿ ಕರ್ನಾಟಕ ವಿಧಾನಪರಿಷತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ
- ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ - ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ
- ಬೆಂಗಳೂರು ಶಿಕ್ಷಕರ ಕ್ಷೇತ್ರ - ಎ.ಪಿ. ರಂಗನಾಥ್, ವಕೀಲರು
- ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ - ಶ್ರೀ ಶಿವಶಂಕರ್ ಕಲ್ಲೂರ, ವಕೀಲರು
- ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ - ಶ್ರೀ ತಿಮ್ಮಯ್ಯ ಪುರ್ಲೆ
Last Updated : Nov 14, 2019, 4:16 PM IST