ಕರ್ನಾಟಕ

karnataka

ETV Bharat / state

ಬಸವಕಲ್ಯಾಣದಲ್ಲಿ ಮಾತ್ರ ಜೆಡಿಎಸ್​ ಸ್ಪರ್ಧೆ: ಕುಮಾರಸ್ವಾಮಿ - ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್​ ಸ್ಪರ್ಧೆ

ರಾಜ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಮಾತ್ರ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿಕುಮಾರಸ್ವಾಮಿ ಹೇಳಿದ್ದಾರೆ. ​

Former CM H D Kumaraswamy
ಹೆಚ್.ಡಿ ಕುಮಾರಸ್ವಾಮಿ

By

Published : Mar 24, 2021, 8:00 PM IST

ಬೆಂಗಳೂರು: ಉಪಚುನಾವಣೆಯಲ್ಲಿ ಬಸವಕಲ್ಯಾಣದಿಂದ ಮಾತ್ರ ಜೆಡಿಎಸ್ ಸ್ಪರ್ಧಿಸುತ್ತೆ. ಮಸ್ಕಿ ಮತ್ತು ಬೆಳಗಾವಿ‌ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.‌ಕುಮಾರಸ್ವಾಮಿ‌ ಸ್ಪಷ್ಟಪಡಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

ನಗರದ ಜೆಪಿ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರವನ್ನು ಸವಾಲಾಗಿ ತೆಗೆದುಕೊಂಡು ಗೆಲ್ಲುತ್ತೇವೆ.

ಬಿಜೆಪಿ ಸರ್ಕಾರ ಬಂದ ಮೇಲೆ ಜೆಡಿಎಸ್​ಗೆ ಕೆಲ ಕ್ಷೇತ್ರಗಳಲ್ಲಿ ಹೊಡೆತ ಬಿದ್ದಿದೆ. ಹೀಗಾಗಿ ನನ್ನ ಸಮಯವನ್ನು ಬಸವಕಲ್ಯಾಣ ಕ್ಷೇತ್ರ ಗೆಲ್ಲುವ ಕಡೆ ಕೇಂದ್ರೀಕರಿಸುತ್ತೇನೆ ಎಂದರು.

ABOUT THE AUTHOR

...view details