ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಿಸಿರುವುದು ಪ್ರಜಾಸತ್ತಾತ್ಮಕಕ್ಕೆ ವಿರುದ್ಧವಾಗಿದೆ. ಈ ಮೊಕದ್ದಮೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಸರ್ಕಾರಕ್ಕೆ ಜೆಡಿಎಸ್ ಒತ್ತಾಯಿಸಿದೆ.
ಟಿಕಾಯತ್ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯುವಂತೆ ಜೆಡಿಎಸ್ ಒತ್ತಾಯ - Tikait latest news
ಕೇಂದ್ರ ಸರ್ಕಾರ ಈವರೆಗೆ ರೈತರ ಪ್ರತಿಭಟನೆಯನ್ನು ಗಣನೆಗೆ ತೆಗೆದುಕೊಳ್ಳದೆ ರೈತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದೆ. ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲಿಸುತ್ತೆ..
ಜೆಡಿಎಸ್
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ, ಕಳೆದ ನಾಲ್ಕು ತಿಂಗಳಿನಿಂದಲೂ ದೆಹಲಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದಾರೆ.
ಆದರೆ, ಕೇಂದ್ರ ಸರ್ಕಾರ ಈವರೆಗೆ ರೈತರ ಪ್ರತಿಭಟನೆಯನ್ನು ಗಣನೆಗೆ ತೆಗೆದುಕೊಳ್ಳದೆ ರೈತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದೆ. ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.