ಕರ್ನಾಟಕ

karnataka

ETV Bharat / state

ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಗಮನಾರ್ಹ ಸಾಧನೆ; ಹೆಚ್​ಡಿಕೆ - Bangalore Latest News Update

ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದು ಕೊಂಡಾಡಿರುವ ಮಾಜಿ ಸಿಎಂ ಹೆಚ್​ಡಿಕೆ, ಸಾಧನೆಗೆ ನೆರವಾದ ಎಲ್ಲರಿಗೂ ಟ್ವೀಟ್​ ಮಾಡಿ ಅಭಿನಂದಿಸಿದ್ದಾರೆ.

JDS  Gram Panchayat Election: HDK Notable achievement: H DK
ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ: ಹೆಚ್​ಡಿಕೆ

By

Published : Dec 31, 2020, 11:46 AM IST

ಬೆಂಗಳೂರು:ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟ್ವೀಟ್​

ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟ್ವೀಟ್​

ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ. ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ಹೆಚ್​ಡಿಕೆ ಮನವಿ ಮಾಡಿದ್ದಾರೆ.

ABOUT THE AUTHOR

...view details