ಬೆಂಗಳೂರು:ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಪ್ರಯುಕ್ತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯ ಕೋರಿದ್ದಾರೆ.
ವಿಜಯದಶಮಿಗೆ ಟ್ವೀಟ್ ಮೂಲಕ ಶುಭಾಶಯ ಕೋರಿದ ಜೆಡಿಎಸ್ ಮುಖಂಡರು - ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಪ್ರಯುಕ್ತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯ ಕೋರಿದ್ದಾರೆ.
ಜೆಡಿಎಸ್ ಮುಖಂಡರು
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಮಸ್ತರಿಗೂ ಆಯುಧ ಪೂಜೆ ಹಾಗೂ ವಿಜಯ ದಶಮಿಯ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಆರ್ಶೀರ್ವಾದದಿಂದ ನಾಡು ಸಮೃದ್ಧಿಯತ್ತ ಸಾಗಲಿ. ತಾಯಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯವನ್ನು ಕರುಣಿಸಲಿ ' ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.
ನಾಡಿನ ಸರ್ವರಿಗೂ ಆಯುಧ ಪೂಜೆ ಹಾಗೂ ವಿಜಯ ದಶಮಿಯ ಹಾರ್ದಿಕ ಶುಭಾಶಯಗಳು. ನಾಡದೇವತೆ ಚಾಮುಂಡೇಶ್ವರಿ ತಾಯಿ ಸಮಸ್ತರಿಗೂ ಆರೋಗ್ಯ, ಆಯಸ್ಸು, ನೆಮ್ಮದಿ ಕರುಣಿಸಲಿ ಹಾಗೂ ರೈತರ ಎಲ್ಲಾ ರೀತಿಯ ಸಂಕಷ್ಟಗಳು ದೂರವಾಗಲಿ ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದ್ದಾರೆ.