ಕರ್ನಾಟಕ

karnataka

ETV Bharat / state

ಫೇಸ್​ಬುಕ್​ನಲ್ಲಿ ಜೆಡಿಎಸ್​ ವಿರುದ್ಧ ಅವಹೇಳನಕಾರಿ ಪೋಸ್ಟ್.. ಚುನಾವಣಾ ಆಯೋಗಕ್ಕೆ ದೂರು - ಜೆಡಿಎಸ್ ಕಾನೂನು ಘಟಕ

ಫೇಸ್​ಬುಕ್​ನಲ್ಲಿ ಜೆಡಿಎಸ್​ ನಾಯಕರ ವಿರುದ್ಧ ಅವಹೇಳಕಾರಿಯಾಗಿ ಪೋಸ್ಟ್​ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

JDS , ಜೆಡಿಎಸ್​

By

Published : Nov 20, 2019, 4:21 PM IST

Updated : Nov 20, 2019, 9:00 PM IST

ಬೆಂಗಳೂರು : ಫೇಸ್​ಬುಕ್​ನಲ್ಲಿ ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕುರಿತು ಜೆಡಿಎಸ್ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ದೂರಿನ ಪ್ರತಿ

ದೇವು ಬಿನ್ ಮುದ್ದೇಗೌಡ ಎಂಬ ಫೇಸ್​ಬುಕ್​ ಪೇಜ್ ಮೂಲಕ ‘ಮಣ್ಣಿನ ಮಕ್ಕಳ ಕಣ್ಣೀರು, ಪಕ್ಷದ ಪ್ರಣಾಳಿಕೆ, ನಿಮ್ಮ ವೋಟು ನಮ್ಮ ಸೀಟು ’ ಹೀಗೆ ಅನೇಕ ಪ್ರಚೋದನಕಾರಿ ಪೋಸ್ಟ್​ಗಳನ್ನು ಹಾಕಲಾಗಿದೆ. ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರುಗಳನ್ನು ಅವಹೇಳನಕಾರಿಯಾಗಿ ಪೋಸ್ಟ್ ಮಾಡುವ ಮೂಲಕ ಉಪಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಕ್ಯಾಂಪೇನ್ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದಕ್ಕೆ ಕಾರಣರಾದ ದೇವು ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮನವಿ ಮಾಡಿದ್ದಾರೆ.

Last Updated : Nov 20, 2019, 9:00 PM IST

ABOUT THE AUTHOR

...view details