ಬೆಂಗಳೂರು:ವಿಧಾನಸಭೆ ಉಪ ಚುನಾವಣೆಯಲ್ಲಿ ಜವಾಬ್ದಾರಿ ಹಂಚಿಕೆ ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆ ಸಂಬಂಧ ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಚುನಾವಣೆ ಜವಾಬ್ದಾರಿ ವಹಿಸಲು ಶಾಸಕಾಂಗ ಪಕ್ಷದ ಸಭೆ ಕರೆದ ಹೆಚ್ಡಿಕೆ - ಬೆಂಗಳೂರು ಶಾಸಕಾಂಗ ಪಕ್ಷದ ಸಭೆ ಕರೆದ ಹೆಚ್ ಡಿ ಕುಮಾರಸ್ವಾಮಿ
ವಿಧಾನಸಭೆ ಉಪ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧತೆ ನಡೆಸಿದೆ. ಸದ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಜವಾಬ್ದಾರಿ ಹಂಚಿಕೆ ಹಾಗೂ ವಿಧಾನ ಪರಿಷತ್ ಚುನಾವಣೆ ಸಂಬಂಧ ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಜಿ ಸಿಎಂ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಇನ್ನೂ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿಲ್ಲ. ಹಾಗಾಗಿ ಉಳಿದ ಅಭ್ಯರ್ಥಿಗಳನ್ನು ನಾಳೆ ಅಂತಿಮಗೊಳಿಸುವ ಸಾಧ್ಯತೆ ಇದೆ. ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕಾರ್ಯನಿರ್ವಹಿಸಲು ಕ್ಷೇತ್ರಗಳ ಜವಾಬ್ದಾರಿಯನ್ನು ಹಂಚಿಕೆ ಮಾಡುವ ಸಂಬಂಧ ಈ ಸಭೆ ಕರೆಯಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.