ಬೆಂಗಳೂರು: ಮಡಿಕೇರಿ ಸೋಮವಾರಪೇಟೆ ತಾಲೂಕಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ಗೆ ಜೆಡಿಎಸ್ನ ಎಲ್ಲಾ ಶಾಸಕರನ್ನು ಕರೆದೊಯ್ದು ಚರ್ಚೆ ನಡೆಸಲು ಸಿಎಂ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.
ಆಪರೇಷನ್ ಬಿಜೆಪಿ ಭೀತಿ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಹಿಡಿದಿಟ್ಡುಕೊಳ್ಳುವ ಉದ್ದೇಶದಿಂದ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿ, ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಗೌಡರ ಜೊತೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ.