ಬೆಂಗಳೂರು:ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಮತ್ತಷ್ಟು ಚುರುಕುಗೊಂಡ ಜೆಡಿಎಸ್, ಇಂದು ಅಲ್ಪಸಂಖ್ಯಾತ ಘಟಕದ ಸಭೆ ನಡೆಸಿತು.
ಉಪ ಚುನಾವಣೆ ಬಂದಿದೆ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಾಗಬೇಕಿದೆ. ಹಾಗಾಗಿ, ಪಕ್ಷವನ್ನು ಸಂಘಟಿಸಿ ಮುನ್ನಡೆಸಿಕೊಂಡು ಹೋಗಬೇಕೆಂದು ಅಲ್ಪಸಂಖ್ಯಾತ ಸಮುದಾಯಕ್ಕೆ ದೊಡ್ಡ ಗೌಡರು ಸಲಹೆ ನೀಡಿದರು.
ಅಲ್ಪಸಂಖ್ಯಾತ ಘಟಕದ ಸಭೆ ನಡೆಸಿದ ಗೌಡರು ಜಫ್ರುಲ್ಲಾ ಖಾನ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಜೆಡಿಎಸ್ ಸಾಕಷ್ಟು ಕೊಡುಗೆ ನೀಡಿದೆ. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಕೆ.ಆರ್.ಪುರ ಕ್ಷೇತ್ರಗಳಿಗೆ ಉಪ ಚುನಾವಣೆ ಅಕ್ಟೋಬರ್ ನಲ್ಲಿ ನಡೆಯುತ್ತಿರುವುದರಿಂದ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ವರಿಷ್ಠರು ಸಭೆಯಲ್ಲಿ ಸೂಚನೆ ನೀಡಿದ್ದಾರೆ.