ಬೆಂಗಳೂರು: ನಾನು ಯಾವುದೇ ಕಾರಣಕ್ಕೆ ಪಕ್ಷ ಬಿಡುವುದಿಲ್ಲ ಎಂದು ನೆಲಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಡಾ. ಶ್ರೀನಿವಾಸಮೂರ್ತಿ ಸ್ಪಷ್ಪಪಡಿಸಿದ್ದಾರೆ.
'ಪಕ್ಷ ಬಿಡೋದಿಲ್ಲ': ದೇವೇಗೌಡರೆದುರು ಶ್ರೀನಿವಾಸ್ ಮೂರ್ತಿ,ಕಾಂತರಾಜು ಸ್ಪಷ್ಟನೆ - ಮೇಲ್ಮನೆ ಸದಸ್ಯ ಕಾಂತರಾಜು ಸ್ಪಷ್ಟನೆ
ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ಶಾಸಕ ಡಾ. ಶ್ರೀನಿವಾಸಮೂರ್ತಿ ಮತ್ತು ವಿಧಾನ ಪರಿಷತ್ ಸದಸ್ಯ ಕಾಂತರಾಜು ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಈ ಹಿಂದೆಯೂ ಕೂಡಾ ಇದೇ ರೀತಿ ವದಂತಿ ಹರಡಿತ್ತು. ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ಜೆಡಿಎಸ್ ಪಕ್ಷದಲ್ಲೆ ಮುಂದುವರೆಯುತ್ತೇನೆ. ದೇವೇಗೌಡರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಕಾಂತರಾಜು ಮಾತನಾಡಿ, ನೆಲಮಂಗಲ ಕ್ಷೇತ್ರ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಬಿಜೆಪಿ ಸರ್ಕಾರ ಪತನವಾಗುತ್ತದೆ. ಮೇ ಅಥವಾ ಯಾವಾಗಬೇಕಾದರೂ ಚುನಾವಣೆ ಬರಬಹುದು. ಹಾಗಾಗಿ ಪಕ್ಷ ಸಂಘಟನೆಗೆ ಕೆಲಸ ಮಾಡುವುದಾಗಿ ಹೇಳಿದರು.ನಾನು ಸಹ ಪಕ್ಷ ಬಿಡುವ ಬಗ್ಗೆ ವದಂತಿಗಳು ಬಂದಿದ್ದವು.ಈ ಹಿಂದೆಯೇ ನಾನು ಪಕ್ಷ ಬಿಡುವುದಿಲ್ಲವೆಂದು ಹೇಳಿದ್ದೆ. ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಬಲಪಡಿಸಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಬೇಕು ಎಂದರು.