ಬೆಂಗಳೂರು :ಬಿ.ಎಸ್. ಯಡಿಯೂರಪ್ಪ ಈ ರಾಜ್ಯದ ಮುಖ್ಯಮಂತ್ರಿ ಆಗಿ ಇಂದಿಗೆ ಒಂದು ತಿಂಗಳು. ಹಿಂದಿನ ಸಮ್ಮಿಶ್ರ ಸರ್ಕಾರದ ಮೇಲೆ ಕಾರಣ ಇಲ್ಲದೇ ಆರೋಪ ಮಾಡುತ್ತಿದ್ದ ಇವರು ಇನ್ನೂ ಪೂರ್ಣ ಪ್ರಮಾಣದ ಸರ್ಕಾರ ರಚನೆ ಮಾಡಲು ಸಾಧ್ಯ ಆಗಿಲ್ಲ. ಇದು ವೈಫಲ್ಯದ ಸಂಕೇತ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಪ್ರಭುತ್ವದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತವನ್ನು ನಾವು ಇತಿಹಾಸದಲ್ಲಿ ಓದಿದ್ದೆವು. ಬಿಜೆಪಿ ನಮ್ಮ ರಾಜ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಏಕ ಚಕ್ರಾಧಿಪತ್ಯದ ಆಡಳಿತವನ್ನು ನೀಡುವ ಮೂಲಕ ಜನತಂತ್ರದಲ್ಲೂ ಇದು ಸಾಧ್ಯ ಎಂದು ರುಜುವಾತು ಮಾಡಿದೆ. ಇದಕ್ಕಾಗಿ ಬಿಜೆಪಿಗೆ ಮತ್ತು ಸಂಘ ಪರಿವಾರಕ್ಕೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.