ಬೆಂಗಳೂರು:ರಾಜ್ಯದಲ್ಲಿ ಉಂಟಾಗಿರುವ ನೆರೆಯ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ ಎಂದು ಜೆಡಿಎಸ್ ಆರೋಪಿಸಿದೆ. ಅಲ್ಲದೆ, ರಾಜ್ಯ ಸರ್ಕಾರವು ಪ್ರತಿಪಕ್ಷಗಳ ಶಾಸಕರ ಅನುದಾನವನ್ನು ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 10 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಜೆಡಿಎಸ್ ನಿರ್ಧರಿಸಿದೆ.
ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಜೆಡಿಎಸ್ ನಿರ್ಧಾರ
ರಾಜ್ಯದ ನೆರೆಯ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮನೋಭಾವ ಹೊಂದಿವೆ ಎಂದು ಮತ್ತು ಪ್ರತಿಪಕ್ಷಗಳ ಶಾಸಕರ ಅನುದಾನವನ್ನು ಕಡಿತಗೊಳಿಸುತ್ತಿರುವುದನ್ನು ಖಂಡಿಸಿ, ಅಕ್ಟೋಬರ್ 10 ರಂದು ಜೆಡಿಎಸ್ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.
ಜೆಡಿಎಸ್ ಪಕ್ಷ
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ನೇತೃತ್ವದಲ್ಲಿ ಮೌರ್ಯ ಸರ್ಕಲ್ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿಯಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ, ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.