ಕರ್ನಾಟಕ

karnataka

ETV Bharat / state

KPSC ಪರೀಕ್ಷೆಯಲ್ಲಿ ಮಂಗಳಸೂತ್ರ, ಕಾಲುಂಗುರ ತೆಗೆಸಿದ್ದು ದುರ್ನಡತೆಯ ಪರಮಾವಧಿ: ಜೆಡಿಎಸ್ - JDS reaction Removing mangalsutra in KPSC exam

ಕೆಪಿಎಸ್​ಸಿ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆಸಿರುವುದಕ್ಕೆ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

jds

By ETV Bharat Karnataka Team

Published : Nov 6, 2023, 1:02 PM IST

ಬೆಂಗಳೂರು:ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್​ಸಿ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆಸಿದ್ದು ದುರ್ನಡತೆಯ ಪರಮಾವಧಿ ಎಂದು ಜಾತ್ಯತೀತ ಜನತಾದಳ ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್, ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ? ಎಂದು ಕಿಡಿಕಾರಿದೆ.

ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್​ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ ಟೀಕಿಸಿದೆ.

ಒಂದೆಡೆ ಗೃಹಲಕ್ಷ್ಮಿ ಎನ್ನುವ ರಾಜ್ಯ ಸರ್ಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು?, ಅವರಿಗೆ ಅಷ್ಟೊಂದು ಸೂಕ್ಷ್ಮ ಪ್ರಜ್ಞೆಯ ಕೊರತೆಯೇ?. ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ?, ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ ಎನ್ನುತ್ತಾರೆ ಪರೀಕ್ಷಾರ್ಥಿಗಳು. ಹಾಗಾದರೆ, ಪರೀಕ್ಷಾ ಕೇಂದ್ರಕ್ಕೆ ಬಂದ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರವನ್ನು ಬಲವಂತವಾಗಿ ತೆಗೆಸಿದ್ದು ದುರ್ನಡತೆಯ ಪರಮಾವಧಿ ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ:ಇಂದಿನಿಂದ ಲೆಕ್ಕ ಪರಿಶೋಧಕರ ನೇಮಕಾತಿ ಪರೀಕ್ಷೆ: ಕಠಿಣ ಮುಂಜಾಗ್ರತಾ ಕ್ರಮ ಕೈಗೊಂಡ ಕೆಪಿಎಸ್​ಪಿ

ಕೆಪಿಎಸ್​ಸಿ ಹಾಗೂ ರಾಜ್ಯ ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಬೇಕು ಹಾಗೂ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

ಇದನ್ನೂ ಓದಿ:KPSC recruitment : ಗ್ರೂಪ್ ಸಿ ಹುದ್ದೆಗಳಿಗೆ ನವೆಂಬರ್ 4, 5 ರಂದು ಪರೀಕ್ಷೆ : ಕೆಪಿಎಸ್​​ಸಿ

ABOUT THE AUTHOR

...view details