ಬೆಂಗಳೂರು: ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆ ಪೂರ್ವ ತಯಾರಿಗೆ ಸಂಬಂಧಿಸಿದಂತೆ ಜುಲೈ 15ರಿಂದ ಜುಲೈ 23ರವರೆಗೆ ಸರಣಿ ಸಭೆಗಳನ್ನು ನಡೆಸಲು ಜೆಡಿಎಸ್ ತೀರ್ಮಾನಿಸಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಾಳೆಯಿಂದ ಜುಲೈ 23ರವರೆಗೆ ನಡೆಯಲಿರುವ ಸಭೆಗೆ ಜಿಲ್ಲಾವಾರು ಪಕ್ಷದ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಹಾಲಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ತು ಸದಸ್ಯರುಗಳು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳನ್ನು ಆಹ್ವಾನಿಸಲಾಗಿದೆ.
ಈ ತುರ್ತು ಸಭೆಯಲ್ಲಿ ಮುಂಬರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚಿಸಲಾಗುವುದು. ಸಿದ್ಧತೆ ಒಳಗೊಂಡಂತೆ ಇತರೆ ವಿಷಯಗಳ ಕುರಿತು ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿರವರು ಮಾರ್ಗದರ್ಶನ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.