ಬೆಂಗಳೂರು :ಕೋವಿಡ್-19 ಕರ್ತವ್ಯಕ್ಕೆ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸುವಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಉಲ್ಲಂಘಿಸಿದೆ ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಆರೋಪಿಸಿದ್ದಾರೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವ ಅವರು, ಕೋವಿಡ್-19 ರ ಕರ್ತವ್ಯಕ್ಕೆ ಬೂತ್ ಮಟ್ಟದ ತಂಡವನ್ನು ರಚಿಸಲಾಗಿದೆ. ಈ ಕರ್ತವ್ಯಕ್ಕೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ತೆಗೆದುಕೊಂಡಿರುವುದು ಸರಿಯಷ್ಟೇ. ಆದರೆ ಈ ಕರ್ತವ್ಯಕ್ಕೆ ತೆಗೆದುಕೊಂಡಿರುವ ನೌಕರರಲ್ಲಿ ನಿಧನರಾಗಿರುವವರು, 50 ವರ್ಷ ಮೇಲ್ಪಟ್ಟವರು, ಮಧುಮೇಹ, ಮೂತ್ರಪಿಂಡ ಕಾಯಿಲೆ, ಉಸಿರಾಟದ ತೊಂದರೆ ಹಾಗೂ ಇನ್ನಿತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಅನೇಕ ಶಿಕ್ಷಕರು ಮತ್ತು ಉಪನ್ಯಾಸಕರು ಈ ಪಟ್ಟಿಯಲ್ಲಿದ್ದಾರೆ.