ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ನಾಳೆ ಕರೆ ನೀಡಿರುವ ಭಾರತ್ ಬಂದ್‌ಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದೆ. ಜನಪರ, ರೈತ ಮತ್ತು ಶ್ರಮಿಕರ ಪರವಾದ ಯಾವುದೇ ಪ್ರತಿಭಟನೆ ಮತ್ತು ಬಂದ್‌ಗೆ ಜೆಡಿಎಸ್ ಬೆಂಬಲ ಸದಾ ಇರುತ್ತದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಭಾರತ್ ಬಂದ್‌ಗೆ ಬೆಂಬಲ ಸೂಚಿಸಿದ ಜೆಡಿಎಸ್ - ಬಂದ್‌ಗೆ ಬೆಂಬಲ ಸೂಚಿಸಿದ ಜೆಡಿಎಸ್
ಜನಪರ, ರೈತ ಮತ್ತು ಶ್ರಮಿಕರ ಪರವಾದ ಯಾವುದೇ ಪ್ರತಿಭಟನೆ ಮತ್ತು ಬಂದ್‌ಗೆ ಜೆಡಿಎಸ್ ಬೆಂಬಲ ಸದಾ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಾಳಿನ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿದ ಜೆಡಿಎಸ್
ಜನಹಿತದಲ್ಲಿ ನಂಬಿಕೆ ಇಟ್ಟು ನಮ್ಮ ಪಕ್ಷ ಕೆಲಸ ಮಾಡುತ್ತದೆ. ಅವರ ಹಿತಕ್ಕೆ ಧಕ್ಕೆ ಎದುರಾದರೆ ಎಲ್ಲ ವೇದಿಕೆಗಳಲ್ಲೂ ದನಿ ಎತ್ತುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದಿದ್ದಾರೆ.
ಬಂದ್ ಶಾಂತಿಯುತವಾಗಿ ನಡೆಯಲಿ. ರೈತರು, ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಬಗ್ಗೆ ಸರ್ಕಾರಗಳ ಗಮನ ಸೆಳೆಯಲಿ ಎಂದು ಹೆಚ್‌ಡಿಕೆ ಆಶಿಸಿದ್ದಾರೆ.