ಬೆಂಗಳೂರು :ರಾಜ್ಯದಲ್ಲಿ ಖಾಲಿ ಇರುವ 7 ವಿಧಾನಪರಿಷತ್ ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆಲ್ಲುವ ಅವಕಾಶ ಜೆಡಿಎಸ್ಗಿದೆ. ಹೀಗಾಗಿ, ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಗೆಲ್ಲುವ ಭರವಸೆಯಿಲ್ಲದಿದ್ದರೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಲಹೆಯಂತೆ ನಡೆಯಲು ಪಕ್ಷವು ನಿರ್ಧರಿಸಿದೆ.
ಈ ಹಿಂದೆ ದೇವೇಗೌಡರಿಗಾಗಿ ರಾಜ್ಯಸಭೆ ಸ್ಥಾನ ತ್ಯಾಗ ಮಾಡಿದ್ದ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬರುತ್ತಿದೆ. ಅವರು ಸರ್ವಸಮ್ಮತ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಏಕೆಂದರೆ, ಕುಪೇಂದ್ರ ರೆಡ್ಡಿ ಬಳಿ ಅಗತ್ಯ ಸಂಪನ್ಮೂಲವಿದೆ ಎಂದು ಮೂಲಗಳು ತಿಳಿಸಿವೆ.
ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ದೇವೇಗೌಡರಿಗೆ ನೀಡಲು ಇತ್ತೀಚೆಗೆ ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ, ಜೂನ್ 3ರಂದು ವಿಧಾನಪರಿಷತ್ ಮತ್ತು ಜೂನ್ 10ರಂದು ರಾಜ್ಯಸಭೆ ಚುನಾವಣೆಗಾಗಿ ಜೆಡಿಎಸ್ ಕಾರ್ಯತಂತ್ರ ರೂಪಿಸಿದೆ.