ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರ ಒಂದನ್ನು ಹೊರತುಪಡಿಸಿ ಉಳಿದ ಎಲ್ಲ 14 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಹೇಳಿದರು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ವರಿಷ್ಠರು ಪ್ರಕಟಿಸಲಿದ್ದಾರೆ. ನಮ್ಮ ಪಕ್ಷದಿಂದ ಅನರ್ಹರಾಗಿರುವ ಶಾಸಕರ ಮೂರೂ ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ. ನಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳುತ್ತೇವೆ ಎಂದರು.