ಕರ್ನಾಟಕ

karnataka

ETV Bharat / state

ಮೂವರು ಬಂಧಿತ ಆರೋಪಿಗಳಲ್ಲಿ ಕೊರೊನಾ ಪಾಸಿಟಿವ್​​.. ಪೊಲೀಸರಲ್ಲಿ ಹೆಚ್ಚಿದ ಆತಂಕ - ಮುರುಗೇಶ ಪಾಳ್ಯ

ಕೊರೊನಾ ಕಾಣಿಸಿಕೊಂಡ ಬೆನ್ನಲೇ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿ ಮನದಲ್ಲಿ ದುಗುಡ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪೊಲೀಸರನ್ನು ಕೊರೊನಾ ಟೆಸ್ಟ್​ಗೆ‌‌ ಒಳಪಡಿಸಲು ಸಿದ್ಧತೆ ನಡೆಸುತ್ತಿದೆ.

ಪೊಲೀಸರಲ್ಲಿ ಆತಂಕ
ಪೊಲೀಸರಲ್ಲಿ ಆತಂಕ

By

Published : Jun 5, 2020, 5:51 PM IST

ಬೆಂಗಳೂರು:ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೀವನ್ ಭೀಮಾ ನಗರ ಪೊಲೀಸರಿಂದ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಮುರುಗೇಶ ಪಾಳ್ಯದ ಮೂವರು ಆರೋಪಿಗಳನ್ನು ಯುವತಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧಿಸಲಾಗಿತ್ತು. ಇವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳಿಗೆ ಪಾಸಿಟಿವ್ ಬಂದಿದೆ. ಈ ಸಂಬಂಧ ಆರೋಪಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪೊಲೀಸರಲ್ಲಿ ಆತಂಕ ಮನೆ ಮಾಡಿದೆ.

ಜೀವನ್ ಭೀಮಾ ನಗರ ಪೊಲೀಸ್​ ಠಾಣೆ..

ಕೊರೊನಾ ಕಾಣಿಸಿಕೊಂಡ ಬೆನ್ನಲೇ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿ ಮನದಲ್ಲಿ ದುಗುಡ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪೊಲೀಸರನ್ನು ಕೊರೊನಾ ಟೆಸ್ಟ್​ಗೆ‌‌ ಒಳಪಡಿಸಲು ಸಿದ್ಧತೆ ನಡೆಸುತ್ತಿದೆ. ಜೀವನ್ ಭೀಮಾನಗರ ಠಾಣೆಯನ್ನು ಸೀಲ್‌ಡೌನ್ ಮಾಡುವ ಸಾಧ್ಯತೆಯಿದೆ.

ABOUT THE AUTHOR

...view details