ಬೆಂಗಳೂರು:ಕೋವಿಡ್ 2ನೇ ಅಲೆ ಹಿನ್ನೆಲೆ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ" ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಮೂಂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಏಪ್ರಿಲ್ ತಿಂಗಳ ಕಾರ್ಯಕ್ರಮ ಮುಂದೂಡಿಕೆ - jilladihakarigala nade halli kade progerm postponed
ಏಪ್ರಿಲ್ ತಿಂಗಳಲ್ಲಿ ಕೊರೊನಾದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೂಂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ/ತಹಶೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ.
ಹೀಗಾಗಿ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಸಾಂಕ್ರಾಮಿಕ ರೋಗ ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ತಿಂಗಳ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.