ಬೆಂಗಳೂರು:ಜಿಂದಾಲ್ ಕುರಿತು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಮತ್ತೊಂದು ಪತ್ರ ಬರೆದಿದ್ದಾರೆ.
ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆಗಿರುವ ಕಾರಣದಿಂದ ಎಂ ಬಿ ಪಾಟೀಲ್ ಅವರಿಗೆ ಪತ್ರ ಬರೆದಿರುವ ಎಚ್ಕೆಪಿ, ಸಚಿವ ಸಂಪುಟ ಉಪ ಸಮಿತಿ ಪರಿಶೀಲನೆ ಮಾಡಬೇಕಾದ ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
ಸಚಿವ ಸಂಪುಟ ಉಪ ಸಮಿತಿ ಮೊದಲ ಸಭೆ ಇಂದು ನಡೆಯುವ ಹಿನ್ನೆಲೆ 9 ಅಂಶಗಳನ್ನು ಪ್ರಸ್ತಾಪಿಸಿರುವ ಎಚ್ ಕೆ ಪಾಟೀಲ್ ಈ ಬಗ್ಗೆ ಗಂಭೀರವಾಗಿ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ.
ಒಟ್ಟಾರೆ ಜಿಂದಾಲ್ ವಿಚಾರವಾಗಿ ಸಮ್ಮಿಶ್ರ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಅಪಸ್ವರ ಎತ್ತಿ ದೊಡ್ಡ ಹೋರಾಟವನ್ನೇ ನಡೆಸಿರುವ ಪಾಟೀಲರು ಮೇಲಿಂದ ಮೇಲೆ ಪತ್ರ ಬರೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ.