ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಬೃಹತ್ ಉದ್ಯೋಗ ಮೇಳ: 120 ಕಂಪನಿಗಳಿಂದ 5 ಸಾವಿರ ಉದ್ಯೋಗಾವಕಾಶ

ಡಿ.12ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಶಾಂತ ಕೃಷ್ಣಮೂರ್ತಿ ಫೌಂಡೇಷನ್​ನ ಅಧ್ಯಕ್ಷೆ ಶಾಂತ ಕೃಷ್ಣಮೂರ್ತಿ ತಿಳಿಸಿದರು. ರಾಮಮೂರ್ತಿ ನಗರದ ಎನ್‌ಆರ್‌ಐ ಲೇಔಟ್ ಬಡಾವಣೆಯಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ ಇನ್ಫೋಸಿಸ್, ಐಬಿಎಂ, ಬಾಷ್, ಟೊಯೊಟಾ ಸೇರಿದಂತೆ 120ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಸುಮಾರು 5,000 ಉದ್ಯೋಗಾವಕಾಶಗಳನ್ನು ಕಲ್ಪಿಸುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.

Bangalore
ಡಿ.12ರಂದು ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳ

By

Published : Dec 6, 2020, 5:41 PM IST

ಬೆಂಗಳೂರು: ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿರುವುದರಿಂದ ಆ ಕುಟುಂಬಗಳು ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಂತ ಕೃಷ್ಣಮೂರ್ತಿ ಫೌಂಡೇಷನ್ ವತಿಯಿಂದ ಡಿ.12ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಫೌಂಡೇಷನ್​ನ ಅಧ್ಯಕ್ಷೆ ಶಾಂತ ಕೃಷ್ಣಮೂರ್ತಿ ತಿಳಿಸಿದರು.

ರಾಮಮೂರ್ತಿ ನಗರದ ಎನ್‌ಆರ್‌ಐ ಲೇಔಟ್ ಬಡಾವಣೆಯಲ್ಲಿರುವ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ ಇನ್ಫೋಸಿಸ್, ಐಬಿಎಂ, ಬಾಷ್, ಟೊಯೊಟಾ ಸೇರಿದಂತೆ 120ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಸುಮಾರು 5,000 ಉದ್ಯೋಗಾವಕಾಶಗಳನ್ನು ಕಲ್ಪಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.

ಡಿ.12ರಂದು ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳ

ಕೋವಿಡ್ ಹಿನ್ನೆಲೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಗಮಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅಲ್ಲದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳದೆ ನೇರವಾಗಿ ಬರುವವರಿಗಾಗಿ ಪ್ರತ್ಯೇಕವಾದ ಕೌಂಟರ್‌ಗಳನ್ನು ಸ್ಥಾಪಿಸಿ, ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಮಾತನಾಡಿ, ಸಾಫ್ಟ್​ವೇರ್​, ಹಾರ್ಡ್​ವೇರ್​, ಸೇಲ್ಸ್, ಮಾರ್ಕೆಟಿಂಗ್, ಬಿಪಿಒ, ಬ್ಯಾಂಕಿಂಗ್, ಅಕೌಂಟಿಂಗ್, ಗ್ರಾಫಿಕ್ಸ್ ಡಿಸೈನಿಂಗ್, ರೀಟೈಲ್, ಮ್ಯಾನುಫ್ಯಾಕ್ಚರಿಂಗ್, ಮ್ಯಾನೇಜ್‌ಮೆಂಟ್ ಹಾಗೂ ಇನ್ನಿತರ ವಲಯಗಳ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಈಗಾಗಲೇ ಸುಮಾರು 1200ಕ್ಕೂ ಹೆಚ್ಚು ಮಂದಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಡಿ.12ರಂದು ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳ

ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: ವಿ.ಸೋಮಣ್ಣ

ಎನ್‌ಆರ್‌ಐ ಲೇಔಟ್‌ನಲ್ಲಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್ ಮುಂಭಾಗದಲ್ಲಿ ಡಿ.12ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಈ ಉದ್ಯೋಗ ಮೇಳ ನಡೆಯಲಿದೆ. ಆಕಾಂಕ್ಷಿಗಳು ಮೊಬೈಲ್ ಸಂಖ್ಯೆ: 9066850012,8884667699 ಗೆ ಕರೆ, ಎಸ್‌ಎಂಎಸ್ ಅಥವಾ ವಾಟ್ಸಪ್ ಮಾಡಬಹುದು. ಇಲ್ಲವೇ ಇಮೇಲ್ ವಿಳಾಸ balc.jobfair@gmail.comಗೆ ನಿಮ್ಮ ಸ್ವ-ವಿವರವನ್ನು ಕಳುಹಿಸಬಹುದು.

ಉದ್ಯೋಗ ಮೇಳಕ್ಕೆ ಬರುವ ಆಕಾಂಕ್ಷಿಗಳು ತಮ್ಮೊಂದಿಗೆ ನಾಲ್ಕರಿಂದ ಐದು ಜೊತೆ ದಾಖಲಾತಿಗಳ ಪ್ರತಿಗಳನ್ನು ತಂದರೆ, ಒಂದಕ್ಕಿಂತ ಹೆಚ್ಚಿನ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಂದರ್ಶನ ನೀಡಲು ಅನುಕೂಲವಾಗುತ್ತದೆ. ಮಹಿಳೆಯರು ಹಾಗೂ ವಿಕಲಚೇತನರಿಗೆ ಪ್ರತ್ಯೇಕ ಕೌಂಟರ್‌ಗಳನ್ನು ರಚಿಸಲಾಗುವುದು ಎಂದು ಅವರು ವಿವರಿಸಿದರು.

ABOUT THE AUTHOR

...view details