ಕರ್ನಾಟಕ

karnataka

ETV Bharat / state

ನಾಳೆಯಿಂದ ಜಂಟಿ ಅಧಿವೇಶನ.. ಆಡಳಿತ-ಪ್ರತಿಪಕ್ಷಗಳ ವಾಕ್ಸಮರಕ್ಕೆ ಸಿದ್ಧತೆ!?

ಪ್ರಮುಖವಾಗಿ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಉಭಯ ಸದನಗಳಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಹೆಚ್ಚಾಗಿದೆ. ವಿಧಾನ ಪರಿಷತ್‍ನಲ್ಲಿ ಗೋಹತ್ಯೆ ನಿಷೇಧವನ್ನು ಸರ್ಕಾರ ಮಂಡಿಸಬೇಕಿದೆ‌. ಪ್ರತಿಪಕ್ಷ ಕಾಂಗ್ರೆಸ್ ಸದನದಲ್ಲಿ ರೈತಪರ ಹೋರಾಟವನ್ನು ಮುಂದುವರೆಸಲು ಉದ್ದೇಶಿಸಿದೆ. ಜೆಡಿಎಸ್ ತೈಲಬೆಲೆ, ಅಗತ್ಯವಸ್ತುಗಳ ಬೆಲೆ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ..

joint session to be start from 28 th january
ನಾಳೆಯಿಂದ ಜಂಟಿ ಅಧಿವೇಶನ

By

Published : Jan 27, 2021, 4:33 PM IST

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಫೆಬ್ರವರಿ 5ರವರೆಗೆ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಈ ಅಧಿವೇಶನವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ನಾಳೆ ( ಗುರುವಾರ) ಬೆಳಗ್ಗೆ 11ಗಂಟೆಗೆ ಭಾಷಣ ಮಾಡಲಿದ್ದಾರೆ. ಶುಕ್ರವಾರದಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು ನಡೆಯಲಿವೆ.

ಈ ಸಂದರ್ಭದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜಾಗಿವೆ. ಸಚಿವ ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಬಿಕ್ಕಟ್ಟಿನ ಬೆನ್ನಲ್ಲೇ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರತಿಪಕ್ಷಗಳು ಒಡ್ಡುವ ಅಸ್ತ್ರಗಳನ್ನು ನೂತನ ಸಚಿವರು ಎದುರಿಸಬೇಕಾಗಿದೆ.

ಕೋವಿಡ್‍-19ನಿಂದಾಗಿ ಉಂಟಾಗಿರುವ ಆರ್ಥಿಕ ಸಂಕಷ್ಟ, ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಅತಿವೃಷ್ಟಿ ಪರಿಹಾರ ವಿಳಂಬ ಮೊದಲಾದ ವಿಚಾರಗಳು ಅಧಿವೇಶನದಲ್ಲಿ ಪ್ರಸ್ತಾಪವಾಗಲಿವೆ.

ಅದಕ್ಕಿಂತ ಪ್ರಮುಖವಾಗಿ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಉಭಯ ಸದನಗಳಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಹೆಚ್ಚಾಗಿದೆ. ವಿಧಾನ ಪರಿಷತ್‍ನಲ್ಲಿ ಗೋಹತ್ಯೆ ನಿಷೇಧವನ್ನು ಸರ್ಕಾರ ಮಂಡಿಸಬೇಕಿದೆ‌. ಪ್ರತಿಪಕ್ಷ ಕಾಂಗ್ರೆಸ್ ಸದನದಲ್ಲಿ ರೈತಪರ ಹೋರಾಟವನ್ನು ಮುಂದುವರೆಸಲು ಉದ್ದೇಶಿಸಿದೆ. ಜೆಡಿಎಸ್ ತೈಲಬೆಲೆ, ಅಗತ್ಯವಸ್ತುಗಳ ಬೆಲೆ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆಗಳಿವೆ.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಕೋವಿಡ್ ಹಿನ್ನೆಲೆ ಕಳೆದೆರಡು ಅಧಿವೇಶನಗಳ ಪೂರ್ವ ನಿಗದಿತ ಅವಧಿ ಮೊಟಕುಗೊಳಿಸಲಾಗಿತ್ತು. ಇದೀಗ ಸಭಾಪತಿ ಆಯ್ಕೆ, ಉಪಸಭಾಪತಿ ಚುನಾವಣೆ ನಡೆಯುವ ಹಿನ್ನೆಲೆ ಜಂಟಿ ಅಧಿವೇಶನ ಮತ್ತಷ್ಟು ಕಾವು ಏರಲಿದೆ.

ಇದನ್ನೂ ಓದಿ:ಪರಿಷತ್ ಸದಸ್ಯರ ಜೊತೆ ಸಿಎಂ ಸಭೆ: ಸಭಾಪತಿ, ಉಪಸಭಾಪತಿ ಸ್ಥಾನದ ಗೊಂದಲಕ್ಕೆ ಬೀಳಲಿದೆಯಾ ತೆರೆ!?

ABOUT THE AUTHOR

...view details