ಕರ್ನಾಟಕ

karnataka

ETV Bharat / state

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ನೇಮಕ: ಜೋಶಿ, ಬೊಮ್ಮಾಯಿ, ಬಿಎಸ್​ವೈಗೂ ಸ್ಥಾನ - ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರ ನೇಮಕ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರು, ವಿಶೇಷ ಆಹ್ವಾನಿತರು, ಖಾಯಂ ಆಹ್ವಾನಿತರನ್ನು ನೇಮಿಸಿದ್ದಾರೆ. ಈ ಕುರಿತಂತೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.

JP Nadda
ಜೆ.ಪಿ.ನಡ್ಡಾ

By

Published : Oct 7, 2021, 5:22 PM IST

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರು, ವಿಶೇಷ ಆಹ್ವಾನಿತರು, ಖಾಯಂ ಆಹ್ವಾನಿತರನ್ನು ನೇಮಿಸಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ನೇಮಿಸಲಾಗಿದೆ.

ರಾಜ್ಯದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಜಗದೀಶ್​​ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥನಾರಾಯಣ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೋಟಾ ಶ್ರೀನಿವಾಸ ಪೂಜಾರಿ ಅವರು ಆಹ್ವಾನಿತರಾಗಿದ್ದಾರೆ.

ಇದನ್ನೂ ಓದಿ: ಐಟಿ ದಾಳಿ ಬಗ್ಗೆ ಯಡಿಯೂರಪ್ಪ ಅವರನ್ನೇ ಕೇಳಿ.. ಈ ಬಾರಿ ಬೈ ಎಲೆಕ್ಷನ್​ನಲ್ಲಿ ನಾವೇ ಗೆಲ್ಲೋದು: ಸಿದ್ದರಾಮಯ್ಯ

ABOUT THE AUTHOR

...view details