ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣ ವಿವಾದ ಕುರಿತು ಸಿಬಿಐ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು, ಈ ತೀರ್ಪನ್ನು ಸ್ವಾಗತಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಬಾಬರಿ ಮಸೀದಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಇನ್ನಿತರ ನಾಯಕರ ಮೇಲೆ ಕೇಸ್ಗಳು ಇದ್ದವು. ಅವರನ್ನು ಕಟಕಟೆಯಲ್ಲಿ ನಿಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಆದ ನಂತರ ಮಹತ್ವದ ಐತಿಹಾಸಿಕ ತೀರ್ಪು ಬಂದಿದೆ. ಎಲ್ಲರನ್ನೂ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದನ್ನು ಸ್ವಾಗತ ಮಾಡುತ್ತಿದ್ದೇನೆ ಎಂದರು.