ಬೆಂಗಳೂರು :ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ರಿತುರಾಜ್ ಅವಸ್ಥಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ರಿತುರಾಜ್ ಅವಸ್ಥಿ
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರಿಗೆ ಪ್ರಮಾಣ ವಚನ ಬೋಧಿಸಿದರು..
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೂತನ ಮುಖ್ಯನ್ಯಾಯೂರ್ತಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸಬಾಬು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ ರಂಗನಾಥ್ ಸೇರಿದಂತೆ ಹಲವು ವಕೀಲರು ಹಾಗೂ ನ್ಯಾಯಾಲಯದ ಅಧಿಕಾರಿಗಳು ಭಾಗವಹಿಸಿದ್ದರು.