ಕರ್ನಾಟಕ

karnataka

ETV Bharat / state

ಪಂಜಾಬ್- ಹರಿಯಾಣ ಹೈಕೋರ್ಟ್​ಗೆ ನ್ಯಾ.ಸತ್ಯನಾರಾಯಣ ವರ್ಗಾವಣೆಗೆ ಶಿಫಾರಸು - ರಾಜ್ಯ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ

ರಾಜ್ಯ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಅವರನ್ನು ಪಂಜಾಬ್-ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಎಸ್.ಎನ್. ಸತ್ಯನಾರಾಯಣ
ಎಸ್.ಎನ್. ಸತ್ಯನಾರಾಯಣ

By

Published : Mar 9, 2020, 9:28 PM IST

ಬೆಂಗಳೂರು:ರಾಜ್ಯ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಅವರನ್ನು ಪಂಜಾಬ್-ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ನೇತೃತ್ವದ ಕೊಲಿಜಿಯಂ ಮಾರ್ಚ್ 5ರಂದು ನಡೆಸಿದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಕೇಂದ್ರಕ್ಕೆ ಶಿಫಾರಸು ಪತ್ರ ಕಳುಹಿಸಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ರವಿ ಮಳಿಮಠ ಅವರನ್ನು ಕೊಲಿಜಿಯಂ ಶಿಫಾರಸು ಮೇರೆಗೆ ಉತ್ತರಾಖಂಡ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ವರ್ಗಾವಣೆಗೆ ಶಿಫಾರಸುಗೊಂಡಿರುವ ನ್ಯಾಯಮೂರ್ತಿ ಸತ್ಯನಾರಾಯಣ ಅವರು 2008ರಿಂದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ 25 ವರ್ಷಗಳ ಕಾಲ ಹೈಕೋರ್ಟ್​ನಲ್ಲಿ ವಕೀಲರಾಗಿ, ವಿಶೇಷ ಅಭಿಯೋಜಕರಾಗಿ ಸೇವೆ ಸಲ್ಲಿಸಿದ್ದರು.

ಅಕ್ರಮ, ಅವ್ಯವಹಾರ ಮತ್ತು ಕರ್ತವ್ಯ ಲೋಪ ಎಸಗುವ ಸರ್ಕಾರಿ ಅಧಿಕಾರಿಗಳ ವಿರುದ್ಧ ತೆರೆದ ನ್ಯಾಯಾಲಯದಲ್ಲೇ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದ ನ್ಯಾ. ಸತ್ಯನಾರಾಯಣ ಅವರು, ಕಳೆದ ತಿಂಗಳು ಕೋರ್ಟ್ ಆದೇಶ ಪಾಲಿಸುವಲ್ಲಿ ವಿಫಲರಾದ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನೇ ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದರು.

ABOUT THE AUTHOR

...view details