ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಡಿಸಿಎಂ ಆಗುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ಕೊಡುತ್ತೇನೆ ಎಂದು ಹೇಳಿದ್ದಾರೆ.
ಯಾವ್ದೇ ಕಾರಣಕ್ಕೂ ನಾನು ಡಿಸಿಎಂ ಆಗಲ್ಲ: ಈಶ್ವರಪ್ಪ ಸ್ಪಷ್ಟನೆ - ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ
ಯಾವುದೇ ಕಾರಣಕ್ಕೂ ನಾನು ಡಿಸಿಎಂ ಆಗುವುದಿಲ್ಲ. ಆ ಬಗ್ಗೆ ಯೋಚನೆಯನ್ನೂ ಮಾಡಿಲ್ಲವೆಂದು ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ಆಗುತ್ತೆ, ಎಲ್ಲರಿಗೂ ಅವಕಾಶ ಸಿಗುತ್ತದೆ. ವಿಳಂಬವಾದರೂ ಎಲ್ಲವೂ ಸರಿ ಹೋಗುತ್ತದೆ ಎಂದರು.
ಇನ್ನು, ಇದೇ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆದಷ್ಟು ಬೇಗ ಗುಣಮುಖರಾಗಲಿ ಎಂದು ಈಶ್ವರಪ್ಪ ಹಾರೈಸಿದರು. ರಾಜಕೀಯವೇ ಬೇರೆ, ಸ್ನೇಹ ಸಂಬಂಧಗಳೇ ಬೇರೆ. ಸಾಧ್ಯವಾದ್ರೇ ಇಂದು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸುತ್ತೇನೆ ಎಂದು ತಿಳಿಸಿದರು.
Last Updated : Dec 12, 2019, 3:54 PM IST