ಕರ್ನಾಟಕ

karnataka

ETV Bharat / state

ಕಾಂಗ್ರೆಸ್‌ ಕಾಲದಲ್ಲಿ ಚೀಫ್ ಮಿನಿಸ್ಟರ್‌, 'ಚೀಟಿ ಮಿನಿಸ್ಟರ್‌' ಆಗಿತ್ತು: ಸಚಿವ ಡಾ.ಕೆ.ಸುಧಾಕರ್

ಮುಖ್ಯಮಂತ್ರಿ ಸ್ಥಾನದ ಘನತೆ-ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಕಾಂಗ್ರೆಸ್ ಆಳ್ವಿಕೆಯ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು ಎಂದು ಆರೋಗ್ಯ ಸಚಿವ ಸುಧಾಕರ್ ಸರಣಿ ಟ್ವೀಟ್​ ಮೂಲಕ ಟೀಕಿಸಿದ್ದಾರೆ.

KN_BNG_05_SUDHAKAR_TWEET_SCRIPT_7201951
ಸಚಿವ ಕೆ.ಸುಧಾಕರ್

By

Published : Aug 9, 2022, 8:09 PM IST

ಬೆಂಗಳೂರು: ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ. ಕಾಂಗ್ರೆಸ್ ಆಳ್ವಿಕೆ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು. ದಿಲ್ಲಿ ಪೋಸ್ಟ್ ಮ್ಯಾನ್​ಗಳು ಕಳುಹಿಸಿದ ಚೀಟಿ ಆಧಾರದ ಮೇಲೆ ಕಾಂಗ್ರೆಸ್ ಬದಲಾಯಿಸಿದ ಮುಖ್ಯಮಂತ್ರಿಗಳ ಸಂಖ್ಯೆಯ ಲೆಕ್ಕ ಕೊಡಬೇಕೇ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಘನತೆ-ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್​ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂದಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್​ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಶೀಘ್ರವೇ ಅಲೆಮಾರಿ ಜನಾಂಗದ ಸಮಾವೇಶ, 3,500 ಮನೆಗಳ ಹಕ್ಕು ಪತ್ರ ವಿತರಣೆ: ಸಚಿವ ಕೋಟಾ

ABOUT THE AUTHOR

...view details