ಬೆಂಗಳೂರು:ನವೆಂಬರ್ 26 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 ಅನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದ್ದು, ಡಿಸೆಂಬರ್ 31 ರಂದು ನಡೆಸಲು ಚಿಂತನೆ ನಡೆಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಮೂಲಕ ತಿಳಿಸಿದೆ.
ನವೆಂಬರ್ 26 ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ
K-SET exam Postponed: ನವೆಂಬರ್ 26 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
Published : Nov 8, 2023, 8:36 PM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 (ಕೆ ಸೆಟ್-2023) ಅನ್ನು ನವೆಂಬರ್ 26 ರಂದು ನಿಗದಿಪಡಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯು ನಡೆಯುವ ದಿನಾಂಕವನ್ನು ತಾತ್ಕಾಲಿಕವಾಗಿ ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಮೂಲಕ ತಿಳಿಸಿದೆ.
ಇತ್ತೀಚೆಗಷ್ಟೆ ವಿವಿಧ ನಿಗಮ ಮಂಡಳಿಗಳ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪರೀಕ್ಷಾ ಅಕ್ರಮದ ಆರೋಪದ ನಡುವೆ ಮತ್ತೊಂದು ಪರೀಕ್ಷೆ ನಡೆಸುವುದು ಬೇಡ ಎನ್ನುವ ಕಾರಣಕ್ಕಾಗಿ ನವೆಂಬರ್ 26 ರಂದು ನಡೆಯಬೇಕಿದ್ದ ಕೆ ಸೆಟ್ ಪರೀಕ್ಷೆ ಮುಂದೂಡಿಕೆ ಮಾಡಿರಬಹುದು ಎನ್ನಲಾಗಿದೆ.